ಬೆಂಗಳೂರು: ಸುಪ್ರೀಂಕೋರ್ಟ್ ಎಂಟು ವಾರದಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಗಿಸಲು ಸೂಚಿಸಿದೆ. ಚುನಾವಣೆ ನಡೆಸುವ ಬಗ್ಗೆ ನಾವು ಸ್ವಾಗತಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದಕ್ಕೆ ಸಂಬಂಧಿಸಿದ ಡಿ ಲಿಮಿಟೇಷನ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಎಂಟು ವಾರದಲ್ಲಿ ಚುನಾವಣಾ ಪ್ರಕ್ರಿಯೆ ಶುರುವಾಗಲಿದೆ. ಈ ಸಂಬಂಧ ಸಮಿತಿ ಕೂಡ ಮಾಡಿದ್ದೇವೆ. ಆದಷ್ಟು ಬೇಗ ಚುನಾವಣೆ ಮಾಡುತ್ತೇವೆ. ಸುಪ್ರೀಂಕೋರ್ಟ್ ತೀರ್ಪನ್ನು ಪಾಲಿಸಬೇಕು, ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಹೇಳಿದರು.
ಹಿಂದಿನ ಆದೇಶದಲ್ಲಿ ಮೀಸಲಾತಿ ಇಲ್ಲವೆಂದು ತೀರ್ಪು ನೀಡಿತ್ತು. ನಂತರ ಒಬಿಸಿ ಮೀಸಲಾತಿ ಸಹಿತ ಚುನಾವಣೆ ಮಾಡಲು ಸೂಚನೆ ನೀಡಿತ್ತು. ನಾವು ಕೂಡ ಒಬಿಸಿ ಮೀಸಲಾತಿ ಇಲ್ಲದೇ ಚುನಾವಣೆ ನಡೆಸುವುದಿಲ್ಲ ಎಂದು ಹೇಳಿದ್ದೆವು. ಈಗ ನಮ್ಮ ಮನ್ನಣೆಯಂತೆ ಒಬಿಸಿ ಮೀಸಲಾತಿಯೊಂದಿಗೆ ಚುನಾವಣೆ ನಡೆಸಲು ಅನುಮತಿ ಸಿಕ್ಕಿದೆ. ಮತ್ತೆ ಕಾಲಾವಕಾಶ ಕೇಳುವುದಿಲ್ಲ. ನ್ಯಾಯಾಲಯದ ತೀರ್ಪನ್ನು ಪಾಲಿಸುತ್ತೇವೆ ಎಂದರು.
ಬಿಬಿಎಂಪಿಗೆ ಎಂಟು ವಾರಗಳ ಗಡುವು: ಎಂಟು ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. 8 ವಾರದೊಳಗೆ ವಾರ್ಡ್ ಪುನರ್ ವಿಂಗಡಣೆ ಮಾಡಿ ಮೀಸಲಾತಿ ನಿಗದಿಗೆ ಕೋರ್ಟ್ ಗಡುವು ನೀಡಿದೆ.
ಓದಿ:15 ವರ್ಷಗಳಲ್ಲಿ ಬೆಂಗಳೂರಿಗೆ ಕೊಟ್ಟ ಅನುದಾನ: ಸಮಗ್ರ ತನಿಖೆಗೆ ಹೆಚ್ಡಿಕೆ ಒತ್ತಾಯ