ಬೆಂಗಳೂರು :ಬಿಜೆಪಿ ಕೋರ್ ಕಮಿಟಿ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 4ರಂದು ಬೆಳಗಾವಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಯಾಣ ಬೆಳೆಸುತ್ತಿದ್ದಾರೆ.
ಡಿ.4 ರಂದು ಸಿಎಂ ಬೆಳಗಾವಿ ಪ್ರವಾಸ : ಕೋರ್ ಕಮಿಟಿ ಸಭೆಯಲ್ಲಿ ಭಾಗಿ - ಡಿಸೆಂಬರ್ 4,5 ರಂದು ಸಿಎಂ ಬೆಳಗಾವಿ ಪ್ರವಾಸ
ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದು, ಡಿಸೆಂಬರ್ 5ರಂದು ಬೆಳಗ್ಗೆ 10ಗಂಟೆಗೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಂದು ಸಂಜೆ 7.30ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ..
ಸಿಎಂ ಬೆಳಗಾವಿ ಪ್ರವಾಸ
ಶುಕ್ರವಾರ ಮಧ್ಯಾಹ್ನ 2.15ಕ್ಕೆ ಸಿಎಂ ಯಡಿಯೂರಪ್ಪ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ತೆರಳಲಿದ್ದಾರೆ. ಸಂಜೆ 7.30ಕ್ಕೆ ಯುಕೆ 27 ಹೋಟೆಲ್‌ನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದು, ಡಿಸೆಂಬರ್ 5ರಂದು ಬೆಳಗ್ಗೆ 10ಗಂಟೆಗೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಂದು ಸಂಜೆ 7.30ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.