ಬೆಂಗಳೂರು: ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸರ್ವಪಕ್ಷ ಸಭೆ ಆರಂಭವಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಜೆಡಿಎಸ್ ಉಪ ನಾಯಕ ಬಂಡೆಪ್ಪ ಕಾಶೆಂಪೂರ್, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್ ಮತ್ತಿತರರು ಭಾಗವಹಿಸಿದ್ದಾರೆ.