ಕರ್ನಾಟಕ

karnataka

ETV Bharat / state

ಸಿಎಂ ಬೊಮ್ಮಾಯಿ ನೇತೃತ್ವದ ಕೋವಿಡ್​​ ಸಭೆಯಲ್ಲಿ ತಜ್ಞರು ನೀಡಿದ ಸಲಹೆಗಳಿವು.. - ಸಿಎಂ ಬೊಮ್ಮಾಯಿ ನೇತೃತ್ವದ ಕೋವಿಡ್​​ ಸಭೆಯ ಮುಖ್ಯಾಂಶ

ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ​ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಈ ವೇಳೆ ಸಭೆಯಲ್ಲಿ ತಜ್ಞರ ಸಮಿತಿ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ..

CM Bommai covid meeting highlights
ಸಿಎಂ ಬೊಮ್ಮಾಯಿ ನೇತೃತ್ವದ ಕೋವಿಡ್​​ ಸಭೆಯಲ್ಲಿ ತಜ್ಞರು ನೀಡಿದ ಸಲಹೆಗಳಿವು

By

Published : Jan 21, 2022, 5:35 PM IST

Updated : Jan 21, 2022, 5:44 PM IST

ಬೆಂಗಳೂರು :ರಾಜ್ಯದಲ್ಲಿ ಸರಾಸರಿ ಮೂರು ದಿನಕ್ಕೆ ಕೋವಿಡ್ ಸೋಂಕಿನ ಪ್ರಕರಣಗಳು ದ್ವಿಗುಣಗೊಳ್ಳುತ್ತಿವೆ. ಒಬ್ಬ ನೋಂಕಿತನಿಂದ ಸರಾಸರಿ 26 ಜನರಿಗೆ ಸೋಂಕು ಹರಡುತ್ತಿದೆ. ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದರೂ ಸರ್ಕಾರ ಸಾಕಷ್ಟು ಎಚ್ಚರಿಕೆ ವಹಿಸುವುದು ಅಗತ್ಯ ಎಂದು ತಜ್ಞರ ಸಮಿತಿ ಸದಸ್ಯರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಚರ್ಚೆಗೆ ಬಂದ ಮುಖ್ಯಾಂಶಗಳ ಸಮಗ್ರ ವಿವರದ ಕುರಿತು ವರದಿ ಇಲ್ಲಿದೆ.

ಸಭೆಗೆ ಮಾಹಿತಿ ನೀಡಿದ ಅಧಿಕಾರಿಗಳು :ಸಭೆ ಆರಂಭಗೊಳ್ಳುತ್ತಿದ್ದಂತೆ ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳಿವೆ. ಇದಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್‌ನಲ್ಲಿದ್ದು, ಒಟ್ಟು 5344 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದರಲ್ಲಿ 340 ಜನ ಐಸಿಯುನಲ್ಲಿದ್ದರೆ, 127 ಮಂದಿ ವೆಂಟಿಲೇಟರ್​​​​ನಲ್ಲಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪಿಎಸ್‌ಎ ಪ್ಲಾಂಟ್​ಗಳು ಕಾರ್ಯಾರಂಭ :ಬೆಂಗಳೂರನ್ನು ಹೊರತು ಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಕೋವಿಡ್ ಪ್ರಕರಣ ವರದಿಯಾಗಿವೆ. ಪಾಸಿಟಿವಿ ದರ ಶೇ. 19.94 ರಲ್ಲಿದೆ. ಮಕ್ಕಳ ಪಾಸಿಟಿವಿಟಿ ದರ ಶೇ.8ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ ದರ ಶೇ. 16.57 ರಷ್ಟಿದೆ.

ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾವಹಿಸಲಾಗುತ್ತಿದೆ. ಕಳೆದ ಎರಡ್ಮೂರು ದಿನಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿದೆ. ಇದರಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ಕೊ-ಮಾರ್ಬಿಡಿಟಿ ಇದ್ದವರ ಸಂಖ್ಯೆ ಹೆಚ್ಚಿದೆ.

ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್‌ಎ ಪ್ಲಾಂಟ್​​​​​ಗಳ ಪೈಕಿ 225 ಕಾರ್ಯಾರಂಭ ಮಾಡಿವೆ. ಎಲ್ಲಾ ಜಿಲ್ಲಾಸ್ಪತ್ರೆಗಳು, 13 ತಾಲೂಕು ಆಸ್ಪತ್ರೆಗಳಲ್ಲಿ ಪಿಎಸ್​​​ಎ ಪ್ಲಾಂಟ್​​​​​ಗಳು ಕಾರ್ಯಾರಂಭ ಮಾಡಿವೆ ಎಂದು ವಿವರ ನೀಡಿದರು.

ವೈದ್ಯಕೀಯ ಸಿಬ್ಬಂದಿಯಲ್ಲಿ ಹೆಚ್ಚಾದ ಕೊರೊನಾ :ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್​​ ಸೋಂಕು ತಗಲುತ್ತಿದೆ. ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೊರೊನಾ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮುಂದಿನ ವಾರ ಕೋವಿಡ್​ ಕೇಸ್​​ ಹೆಚ್ಚಾಗುವ ಸಂಭವ :ನಂತರ ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಕುರಿತು ತಜ್ಞರೊಂದಿಗೆ ಸವಿವರವಾಗಿ ಚರ್ಚಿಸಲಾಯಿತು. ಯಾವುದೇ ಸ್ಥಳದಲ್ಲಿ ಹೆಚ್ಚಿನ ಜನಸಂದಣಿಯಾಗದಂತೆ ನೋಡಿಕೊಳ್ಳುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟರು.

ಕೋವಿಡ್ ಪ್ರಕರಣಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿದ್ದರೂ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ ಇಲ್ಲವೆಂಬ ಅಂಶವನ್ನು ಗಮನಿಸಲಾಯಿತು. ಸೋಂಕಿನ ಪ್ರಮಾಣವೂ ಹೆಚ್ಚಾಗಿದೆ. ಆದರೆ, ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ (peak) ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: BREAKING : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ಧತಿಗೆ ನಿರ್ಧಾರ.. ರಾತ್ರಿ ನಿಷೇಧಾಜ್ಞೆ ಸೇರಿ ಏನೆಲ್ಲಾ ಮುಂದುವರಿಕೆ?

ನೈಟ್​ ಕರ್ಫ್ಯೂ ಅವಧಿ ಹೆಚ್ಚಳ :

ರಾತ್ರಿ ಕರ್ಫ್ಯೂ ಅವಧಿಯನ್ನು ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನಿಗದಿಪಡಿಸಲು ನಿರ್ಧರಿಸಲಾಯಿತು. ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿ ಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ ವಾರಾಂತ ಕರ್ಫ್ಯೂವನ್ನು ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು.

ಆದರೆ, ಮುಂದಿನವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ.

ಸಾರ್ವಜನಿಕರಿಗೆ ಹೆಚ್ಚಿದ ಜವಾಬ್ದಾರಿ :ಇದರಿಂದ ಸಾರ್ವಜನರಿಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅಗತ್ಯವಾಗಿದೆ. ಮಾಲ್, ಹೋಟೆಲ್, ಬಾರ್, ಕ್ಲಬ್,ಪಬ್​​​​ಗಳು ಶೇ. 50 ಅಸನ ಸಾಮರ್ಥ್ಯದೊಂದಿಗೆ ತರೆಯಲು ತೀರ್ಮಾನಿಸಲಾಯಿತು. ಎರಡೂ ಲಸಿಕೆ ಪಡೆಯುವುದು ಕಡ್ಡಾಯ ಎನ್ನುವ ನಿರ್ಧಾರಕ್ಕೆ ಸಭೆಯಲ್ಲಿ ಸಹಮತ ನೀಡಲಾಯಿತು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 21, 2022, 5:44 PM IST

For All Latest Updates

ABOUT THE AUTHOR

...view details