ಬೆಂಗಳೂರು:ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ ಹಾಗೂ ಪ್ರವೀಣ್ ಹತ್ಯೆ ಪ್ರಕರಣ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಜಿಪಿಯನ್ನು ತರಾಟೆಗೆ ತೆಗೆದುಕೊಂಡರು. ಶನಿವಾರ ಬೆಳಗ್ಗೆ ಡಿಜಿಪಿ ಪ್ರವೀಣ್ ಸೂದ್ ಹಾಗೂ ಗುಪ್ತಚರ ಇಲಾಖೆ ಮುಖ್ಯಸ್ಥ ಬಿ. ದಯಾನಂದ್ ರೇಸ್ ವಿವ್ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದರು. ಈ ವೇಳೆ, ಸಿಎಂ ಬೊಮ್ಮಾಯಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸದ ಎದುರು ಎಬಿವಿಪಿ ಪ್ರತಿಭಟನೆಯ ಬಗ್ಗೆ ರಾಜ್ಯ ಗುಪ್ತಚರ ವಿಭಾಗ, ಪೊಲೀಸ್ ವಿಭಾಗಗಳಿಗೆ ಮಾಹಿತಿಯೇ ಗೊತ್ತಿಲ್ಲ. ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕುವ ಮಾಹಿತಿ ಸಿಕ್ಕಿಲ್ಲ ಅಂದರೆ ಹೇಗೆ?. ಈ ಪ್ರತಿಭಟನೆಯಿಂದ ಸರ್ಕಾರಕ್ಕೆ ಭಾರಿ ಮುಜುಗರವಾಗಿದೆ. ಹೀಗಾಗಿ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.