ಕರ್ನಾಟಕ

karnataka

ETV Bharat / state

ಪಿಎಸ್ಐ ನೇಮಕಾತಿ ಅಕ್ರಮ: ಬಿಜೆಪಿ ಶಾಸಕ ದಡೇಸಗೂರು ವಿರುದ್ಧ ತನಿಖೆ ಸುಳಿವು ನೀಡಿದ ಸಿಎಂ

ಪಿಎಸ್​ಐ ನೇಮಕಾತಿ ಅಕ್ರಮ- ಕೇಸ್​ನಲ್ಲಿ ಯಾರೇ ಭಾಗಿಯಾಗಿದ್ದರೂ ತನಿಖೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

cm bommai
ಸಿಎಂ ಬೊಮ್ಮಾಯಿ

By

Published : Sep 6, 2022, 12:26 PM IST

Updated : Sep 6, 2022, 4:59 PM IST

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಯಾರ ಮೇಲೆ ಆರೋಪ ಬಂದರೂ ತನಿಖೆ‌ ಮಾಡಲಾಗುತ್ತದೆ ಎಂದು ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಡೇಸಗೂರು ವಿರುದ್ಧ ತನಿಖೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸುಳಿವು ನೀಡಿದ್ದಾರೆ.

ಆರ್.ಟಿ ನಗರ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಈಗಾಗಲೇ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಹ ಸಲ್ಲಿಸಲಾಗಿದೆ. ಹೊಸದಾಗಿ ಬರುವ ಆರೋಪ ವಿಚಾರಗಳನ್ನು ತನಿಖೆಗೆ ಒಳಪಡಿಸಲಾಗುತ್ತದೆ. ಯಾರ ಮೇಲೆ ಆರೋಪ ಬಂದರೂ ತನಿಖೆ‌ ಮಾಡಲಾಗುತ್ತದೆ ಎಂದು ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಡೇಸಗೂರು 15 ಲಕ್ಷ ರೂಪಾಯಿ ಪಡೆದ ಆರೋಪ ಪ್ರಕರಣದಲ್ಲಿ ಶಾಸಕ ದಡೇಸೂಗೂರು ವಿರುದ್ಧವೂ ತನಿಖೆಯನ್ನು ನಡೆಸುವ ಸುಳಿವನ್ನು ನೀಡಿದರು.

ಬಿಜೆಪಿ ಶಾಸಕ ದಡೇಸಗೂರು ವಿರುದ್ಧ ತನಿಖೆ ಸುಳಿವು ನೀಡಿದ ಸಿಎಂ

ವ್ಯಕ್ತಿಯೊಬ್ಬರಿಂದ 15 ಲಕ್ಷ ರೂಪಾಯಿ ಪಡೆದ ಕುರಿತ ಆಡಿಯೋ ಧ್ವನಿ ತಮ್ಮದೇ ಎಂದು ಶಾಸಕ ದಡೇಸಗೂರು ಸೋಮವಾರ ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೇ ದಡೇಸಗೂರು ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಪ್ರತಿ ಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿದ್ದು, ಈ ಹಂತದಲ್ಲಿ ಸಿಎಂ ತನಿಖೆಯ ಸುಳಿವು ನೀಡಿದ್ದಾರೆ.

ಸಂಬಂಧಿತ ಸುದ್ದಿ..PSI Recruitment Scam... ಜಾಲತಾಣದಲ್ಲಿ ವೈರಲ್​ ಆದ ಆಡಿಯೋ ನನ್ನದೇ: ಶಾಸಕ ದಢೇಸುಗೂರು ಸ್ಪಷ್ಟನೆ

Last Updated : Sep 6, 2022, 4:59 PM IST

ABOUT THE AUTHOR

...view details