ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿರುವ ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು - ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಸದಸ್ಯತ್ವ ಪಡೆದರು.
ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಶಿ ಹಾಗೂ ಗೌರವ ಕೋಶಾಧ್ಯಕ್ಷ ಪಟೇಲ್ ಪಾಂಡು ಅವರು ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿ ಸಿಎಂಗೆ ಕಸಾಪ ಸದಸ್ಯತ್ವ ನೀಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಸಾಹಿತ್ಯ ಪರಿಷತ್ತಿನ ಗುರುತಿನ ಚೀಟಿಯನ್ನು ಡಾ. ಮಹೇಶ ಜೋಶಿ ನೀಡಿದರು.