ಕರ್ನಾಟಕ

karnataka

ETV Bharat / state

ವಿದ್ಯುತ್ ಕಂಪನಿಗಳ ಸುಧಾರಣೆ, ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ : ಮುಖ್ಯಮಂತ್ರಿ ಸೂಚನೆ - Proceedings of the Committee on the Improvement of Electricity Companies

ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ಸರ್ವತೋಮುಖ ಅಭಿವೃದ್ಧಿಯ ಸಲುವಾಗಿ ಏಕಸದಸ್ಯ ಸಮಿತಿಯ ಅವಧಿ ಮುಂದುವರೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ..

cm-bommai-instructed-to-continue-the-term-of-the-unilateral-committee
ವಿದ್ಯುತ್ ಕಂಪೆನಿಗಳ ಸುಧಾರಣೆ, ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ: ಮುಖ್ಯಮಂತ್ರಿ ಸೂಚನೆ

By

Published : Jun 27, 2022, 9:44 PM IST

ಬೆಂಗಳೂರು :ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ಕಾರ್ಯಕ್ಷಮತೆ ಹಾಗೂ ಹಣಕಾಸಿನ ಸಮರ್ಥನೀಯತೆಯ ಬಗ್ಗೆ ಮತ್ತು ಈ ಕಂಪನಿಗಳ ಸರ್ವತೋಮುಖ ಅಭಿವೃದ್ದಿಯ ಸಲುವಾಗಿ, ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಗುರುಚರಣ್ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಏಕಸದಸ್ಯ ಸಮಿತಿಯ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಮಿತಿಯ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಗುರುಚರಣ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ವರದಿಯ ಶಿಫಾರಸುಗಳ ಅನುಷ್ಠಾನದ ಸಂದರ್ಭದಲ್ಲಿ ಅವರ ಸಲಹೆ, ಮಾರ್ಗದರ್ಶನ ಪಡೆಯಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ಏಕಸದಸ್ಯ ಸಮಿತಿಯ ಅವಧಿ ಮುಂದುವರೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಈ ವರದಿಯಲ್ಲಿ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ವಸ್ತುಸ್ಥಿತಿ, ಸುಧಾರಣೆಗಳ ಅಗತ್ಯತೆ ಮತ್ತು ಅನುಷ್ಠಾನ ಯೋಜನೆಯ ಬಗ್ಗೆ ಸವಿಸ್ತಾರ ವಿವರಣೆಗಳನ್ನು ನೀಡುವುದರೊಂದಿಗೆ ರಚನಾತ್ಮಕ ಬದಲಾವಣೆ, ಮಧ್ಯಮ ಮತ್ತು ದೀರ್ಘಾವಧಿಯ ಸುಧಾರಣೆ, ಈ ಸುಧಾರಣೆಗಳ ಸಕಾಲಿಕ ಅನುಷ್ಠಾನದ ಬಗ್ಗೆ ನಿಖರವಾಗಿ ತಿಳಿಸಲಾಗಿದೆ. ಈ ವರದಿಯಲ್ಲಿ ತಿಳಿಸಿರುವ ಸುಧಾರಣಾ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಕುರಿತು ವಿವರವಾಗಿ ಚರ್ಚಿಸಿ, ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಇಂಧನ ಸಚಿವ ವಿ.ಸುನಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಓದಿ :ಜಿ-20 ಸಭೆ ಆಯೋಜನೆಗೆ ರಾಜ್ಯದಿಂದ ಅಗತ್ಯ ಸಹಕಾರ : ಬಸವರಾಜ ಬೊಮ್ಮಾಯಿ

For All Latest Updates

TAGGED:

ABOUT THE AUTHOR

...view details