ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಬಿಜೆಪಿಯಲ್ಲಿ ತಯಾರಿ ಜೋರಾಗಿದ್ದು, ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸ ರೇಸ್ ವ್ಯೂ ಕಾಟೇಜ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಬಿಬಿಎಂಪಿ ಚುನಾವಣೆಗೆ ಪೂರ್ವಸಿದ್ಧತೆ ಮಾಡಿಕೊಳ್ಳುವ ಕುರಿತು ನಡೆಸುತ್ತಿರುವ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಗಳ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.
ಓದಿ: ಡಿಮ್ಯಾಟ್ ಖಾತೆಗೆ ನಾಮಿನಿ ಸೇರಿಸುವುದು ಹೇಗೆ? ಏಕೆ?
ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆವರೆಗೂ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದಿಂದ ಬಿಬಿಎಂಪಿ ಚುನಾವಣೆ ಕುರಿತು ಸಭೆ ನಡೆಯಲಿದೆ. ಮೂರು ದಿನ ಸಭೆ ನಡೆಯಲಿದ್ದು, ಪಕ್ಷದ ಸಭೆಗೂ ಮೊದಲು ಮುಖ್ಯಮಂತ್ರಿಗಳು ರಾಜ್ಯಾಧ್ಯಕ್ಷರು ಸೇರಿದಂತೆ ಪಾಲಿಕೆ ವ್ಯಾಪ್ತಿಯ ಪದಾಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ