ಬೆಂಗಳೂರು: ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿದು ಬೆಂಗಳೂರಿನ ಬಹುತೇಕ ಪ್ರದೇಶಗಳಿಗೆ ಹಾನಿಯಾಗಿದ್ದು, ಈ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ಸಂಜೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿವೃಷ್ಟಿ, ಪ್ರವಾಹ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು. ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ್, ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಸ್.ಟಿ.ಸೋಮಶೇಖರ್ ಭಾಗವಹಿಸಿದ್ದರು.
ಅಲ್ಲದೇ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಿ.ಕುಮಾರ ನಾಯಕ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.