ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ ಅಂತರರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು.
ಅಂತಾರಾಜ್ಯ ಜಲ ವ್ಯಾಜ್ಯಗಳ ಕುರಿತು ಕಾನೂನು ತಜ್ಞರೊಂದಿಗೆ ಸಿಎಂ ಸಭೆ ನವದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ರಾಜ್ಯ ಸರ್ಕಾರದ ಅಡ್ವೋಕೆಟ್ ಜನರಲ್ ಪ್ರಭುಲಿಂಗ ನಾವದಗಿ ಹಾಗೂ ಹಿರಿಯ ಕಾನೂನು ತಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.
ಓದಿ:24 ಗಂಟೆಯ ಕಳೆಯೋದ್ರೊಳಗೆ ಚಿತ್ರದುರ್ಗದಲ್ಲಿ 'ಅದೇ' ರೀತಿ ಅಪಘಾತ.. ಮೂವರು ಹೆಣ್ಮಕ್ಕಳು ಸಾವು!
ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜಲ ವ್ಯಾಜ್ಯಗಳ ಕುರಿತು ಕಾನೂನು ಹೋರಾಟಗಳ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು. ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ನೋಟಿಫಿಕೇಷನ್, ಮೇಕೆದಾಟು ವಿವಾದ, ನದಿ ಜೋಡಣೆ ಕುರಿತು ಕಾನೂನಾತ್ಮಕವಾಗಿ ರಾಜ್ಯ ಹೊಂದಬೇಕಾದ ನಿಲುವು ಸೇರಿದಂತೆ ಎಲ್ಲ ಆಯಾಮದಲ್ಲಿ ಚರ್ಚೆ ನಡೆಸಲಾಯಿತು.
ನಡ್ಡಾ ಭೇಟಿ:ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಇಂದು ನವದೆಹಲಿಗೆ ಬರಲಿದ್ದಾರೆ. ಉತ್ತರ ಪ್ರದೇಶ ಚುನಾವಣಾ ಪ್ರವಾಸದಿಂದ ವಾಪಸಾಗುತ್ತಿದ್ದು, ಬಹುತೇಕವಾಗಿ ಸಂಜೆ ವೇಳೆ ಭೇಟಿಯಾಗಲಿದ್ದಾರೆ. ನಡ್ಡಾ ಭೇಟಿ ನಂತರ ರಾಜಕೀಯ ವಿಷಯದ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.