ನವದೆಹಲಿ/ಬೆಂಗಳೂರು:ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಹೇಳಿಕೆ ಆಧರಿಸಿ ದೂರು ದಾಖಲಾಗಿದೆ. ಆ ದೂರಿನ ಆಧಾರದ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದರು.