ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಮೀಸಲಾತಿ ವಿರೋಧಿ: ಸಿಎಂ ಬೊಮ್ಮಾಯಿ

ಕಾಂಗ್ರೆಸ್​ಗೆ ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ. ಅವರು ಬರೆದಿರುವ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎಂದು ಸಿಎಂ ಬಸವರಾಜ​ ಬೊಮ್ಮಾಯಿ ಹೇಳಿದರು.

ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

By

Published : Apr 3, 2023, 10:21 AM IST

ಬೆಂಗಳೂರು: ಕಾಂಗ್ರೆಸ್ ಪಕ್ಷ ದಲಿತ, ಹಿಂದುಳಿದ ವರ್ಗದ, ಲಿಂಗಾಯತ, ಒಕ್ಕಲಿಗರ ವಿರೋಧಿಯಾಗಿದೆ. ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಬಿಜೆಪಿ ಕೊಟ್ಟಿರುವ ಮೀಸಲಾತಿ ಕಾನೂನು ಬಾಹಿರ, ಸಂವಿಧಾನ ವಿರೋಧಿ ಎನ್ನುವ ಹೇಳಿಕೆ ನೀಡಿದ್ದ ಕಾಂಗ್ರೆಸ್ ವಕ್ತಾರ ಸುರ್ಜೇವಾಲಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿರುಗೇಟು ನೀಡಿದ್ದಾರೆ.

ಆರ್.ಟಿ.ನಗರ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಕಾಂಗ್ರೆಸ್ಸಿನ ವಕ್ತಾರರು ಮತ್ತು ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ. ನಾವೂ ಕೊಟ್ಟಿರುವ ಮೀಸಲಾತಿ ಕಾನೂನು ಬಾಹಿರ, ಸಂವಿಧಾನ ವಿರೋಧಿ ಅಂತಾ ಕೆಲ ಕೆಳಮಟ್ಟದ ಶಬ್ದಗಳನ್ನು ಬಳಸಿದ್ದಾರೆ. ಕಾಂಗ್ರೆಸ್​ಗೆ ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ, ಅವರು ಬರೆದಿರುವ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಜನಸಂಖ್ಯೆ ಆಧಾರಿತವಾಗಿ ಕೊಡಬೇಕು ಅಂತಾ ಸಂವಿಧಾನದಲ್ಲಿದೆ. ನಾವೂ ಕೂಡ ಅದರನುಗುಣವಾಗಿ ಎಸ್​ಸಿ, ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದೇವೆ. ಶೆಡ್ಯೂಲ್ 9ಗೆ ಸೇರಿಸಲು ಶಿಫಾರಸು ಮಾಡಿದ್ದೇವೆ ಎಂದು ಮೀಸಲಾತಿ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡರು.

ಅವರ ಕಾಲದಲ್ಲಿ ಮೀಸಲಾತಿ ಮರುಹಂಚಿಕೆ ಮಾಡಿಲ್ಲ. ಎಸ್ಸಿ, ಎಸ್ಟಿಗಳನ್ನು ಬರೀ ವೋಟ್ ಬ್ಯಾಂಕ್​ಗಾಗಿ ಬಳಸಿದರು. ನ್ಯಾ.ನಾಗಮೋಹನ್ ದಾಸ್ ವರದಿ ಬಂದು 4 ವರ್ಷ ಆಯ್ತು ಅಂತಾ ಸುಳ್ಳು ಹೇಳಿದ್ದಾರೆ. ಯಡಿಯೂರಪ್ಪನವರ ಅವಧಿಯಲ್ಲಿ ರಿಪೋರ್ಟ್ ಬಂದ ಕೂಡಲೇ 6 ತಿಂಗಳಿಗೆ ಸಚಿವ ಸಂಪುಟ ಸಭೆ ನಡೆಸಿದರು. ಕ್ಯಾಬಿನೆಟ್​ನಲ್ಲಿ ಅವರ ಪರ ನಿರ್ಣಯ ಮಾಡಿದ್ದೆವು. ಅವರ ಪರ ಕಾಯ್ದೆ ಮಾಡಿ ನಮ್ಮ ಸರ್ಕಾರ ಆದೇಶ ತಂದು ಶೆಡ್ಯೂಲ್ 9ಗೆ ಸೇರಿಸಲು ಶಿಫಾರಸು ಮಾಡಿದ್ದೇವೆ. ಆದರೆ ನಾವು ಸಾಮಾಜಿಕ ನ್ಯಾಯ ಕೊಡೋದನ್ನು ಕಾಂಗ್ರೆಸ್ ಟೀಕೆ ಮಾಡುತ್ತಿದೆ‌. ಕಾಂಗ್ರೆಸ್ ದಲಿತ, ಹಿಂದುಳಿದ ವರ್ಗದ, ಲಿಂಗಾಯುತ, ಒಕ್ಕಲಿಗರ ವಿರೋಧಿಯಾಗಿದೆ.

ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ. ನಾವೂ ಅಧಿಕಾರಕ್ಕೆ ಬಂದ್ಮೇಲೆ ಮೀಸಲಾತಿ ಹಿಂದೆ ತೆಗೆದುಕೊಳ್ಳುತ್ತೇವೆ ಅಂತಾ ಕಾಂಗ್ರೆಸ್ ಹೇಳ್ತಿದೆ. ಅವರು ವಾಪಸ್ ಬರುವ ಪ್ರಶ್ನೆಯೆ ಇಲ್ಲ. ಇದನ್ನು ಹಿಂದೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ, ಅವರಿಗೆ ಆ ಶಕ್ತಿನೂ ಇಲ್ಲ, ಅವಕಾಶನೂ ಇಲ್ಲ, ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ನಾವೂ ಮಾಡಿರೋದನ್ನ ನೋಡಿ ತಳಮಳಗೊಂಡು ಈ ರೀತಿ ಮಾಡ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ:ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಚುನಾವಣೆಯಿಂದ ಚುನಾವಣೆಗೆ ಸದೃಢವಾಗಿ ಬೆಳೆದ ಬಿಜೆಪಿ

ಬಿಜೆಪಿ ಪಟ್ಟಿ ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಮೊದಲ ಪಟ್ಟಿ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದೇವೆ. ನಿನ್ನೆ ಹಾಗೂ ಮೊನ್ನೆ ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದ್ದೇವೆ. ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ಮಾಡುತ್ತೇವೆ‌ ಬಳಿಕ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಬಹುತೇಕ 8 ನೇ ತಾರೀಕು ಸಂಸದೀಯ ಮಂಡಳಿಯಲ್ಲಿ ಫೈನಲ್ ಆಗಲಿದೆ ಎಂದರು.

ಇದನ್ನೂ ಓದಿ:ದೇವೇಗೌಡರ ನಿವಾಸದಲ್ಲಿ ತಡರಾತ್ರಿ ನಡೆದ ಸಭೆ; ಬಗೆಹರಿಯದ ಹಾಸನ ಟಿಕೆಟ್‌ ಬಿಕ್ಕಟ್ಟು

ABOUT THE AUTHOR

...view details