ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಬಿಡುಗಡೆಗೊಳಿಸಿದರು.
ರೇಸ್ ಕೋರ್ಸ್ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಮಹಾಕುಂಭ ಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದರು. ಅಕ್ಟೋಬರ್ 13, 14, 15, 16ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ -ಹೇಮಾವತಿ -ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಬಾಮೇಳ ನಡೆಯಲಿದೆ. ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಹಾಕುಂಭಮೇಳದ ವಿಶೇಷ ಲೋಗೋ ಸಿದ್ದಪಡಿಸಲಾಗಿದೆ.