ಬೆಂಗಳೂರು :ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ನೈಟ್, ವೀಕೆಂಟ್ ಕರ್ಫ್ಯೂ ಕುರಿತಂತೆ ನಿರ್ಧಾರ ಕೈಗೊಳ್ಳಲಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತಂತೆ ನಡೆಸುತ್ತಿರುವ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ನೈಟ್ ಕರ್ಫ್ಯೂ ಸಮಯ ಬದಲಾವಣೆ, ವೀಕೆಂಡ್ ಕರ್ಫ್ಯೂ ವಾಪಸ್, ಶೇ.50ರ ನಿಯಮ ರದ್ದಿಗೆ ಹೆಚ್ಚಿನ ಒತ್ತಡ ಬಂದಿದೆ. ಈ ಕುರಿತು ಮಹತ್ವದ ಸಮಾಲೋಚನೆ ನಡೆಯುತ್ತಿದೆ. ಈಗಿನಿಂದಲೇ ವೀಕೆಂಡ್ ಕರ್ಫ್ಯೂ ರದ್ದು ಮಾಡಬೇಕೋ ಅಥವಾ ಫೆಬ್ರವರಿಯಿಂದ ಮಾಡಬೇಕೋ ಎನ್ನುವ ಕುರಿತು ಸಮಾಲೋಚಿಸಲಾಗುತ್ತಿದೆ. ಅದೇ ರೀತಿ ಸಭೆ- ಸಮಾರಂಭಕ್ಕೆ ಜನರ ಮಿತಿ ಪರಿಷ್ಕರಣೆ, ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳ ಆರಂಭ ಕುರಿತು ಚರ್ಚೆ ನಡೆಯುತ್ತಿದೆ.
ಸದ್ಯದ ಮಾಹಿತಿ ಪ್ರಕಾರ ಕೋವಿಡ್ ಸ್ಥಿತಿಗತಿ ವಿದೇಶ, ದೇಶ, ರಾಜ್ಯ ಮತ್ತು ಜಿಲ್ಲೆಗಳಲ್ಲಿ ಯಾವ ರೀತಿ ಇದೆ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಈವರೆಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಬೇಕೋ ಬೇಡವೋ ಎಂದು ಕೋವಿಡ್ ಸಭೆಯಲ್ಲಿ ಚರ್ಚಿಸಿ ನಿರ್ಧಾರ: ಸಿಎಂ ಬೊಮ್ಮಾಯಿ