ಕರ್ನಾಟಕ

karnataka

By

Published : Mar 21, 2022, 5:00 PM IST

Updated : Mar 21, 2022, 8:49 PM IST

ETV Bharat / state

ನವೀನ್ ಮೃತದೇಹ ಆಗಮನ: ಪ್ರಧಾನಿ ಮೋದಿ, ವಿದೇಶಾಂಗ ಸಚಿವರಿಗೆ ಸಿಎಂ ಧನ್ಯವಾದ

ನವೀನ್ ಮುಖ ನೋಡಬೇಕೆಂಬುದು ಅವರ ತಂದೆ ತಾಯಿ ಆಸೆಯಾಗಿತ್ತು. ಹೆತ್ತವರ ಕನಸನ್ನು ತಾವು ಈಡೇರಿಸಿದ್ದೀರಿ, ಕರ್ನಾಟಕ ರಾಜ್ಯದ ಪರವಾಗಿ ತಮಗೆ ಧನ್ಯವಾದ ಅರ್ಪಿಸುತ್ತೇನೆ- ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ದೂರವಾಣಿ ಕರೆ.

ನವೀನ್ ಮೃತದೇಹ ಆಗಮನ, ಪಿಎಂ ಮೋದಿಗೆ ದೂರವಾಣಿ ಕರೆ ಮಾಡಿ ಧನ್ಯವಾದ ಸಲ್ಲಿಸಿದ ಸಿಎಂ ಬೊಮ್ಮಾಯಿ
ನವೀನ್ ಮೃತದೇಹ ಆಗಮನ, ಪಿಎಂ ಮೋದಿಗೆ ದೂರವಾಣಿ ಕರೆ ಮಾಡಿ ಧನ್ಯವಾದ ಸಲ್ಲಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟಿದ್ದ ಮೆಡಿಕಲ್‌ ವಿದ್ಯಾರ್ಥಿ ‌ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹ ತಾಯ್ನಾಡು ಹಾವೇರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕರೆ ಮಾಡಿ, ರಾಜ್ಯದ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಚಳಗೆರೆಯಿಂದ ಬೆಂಗಳೂರಿಗೆ ವಾಪಸಾದ ಬಳಿಕ ದೂರವಾಣಿ ಕರೆ ಮಾಡಿ ಪ್ರಧಾನಿ ಜೊತೆ 3 ನಿಮಿಷಗಳ ಕಾಲ ಮಾತನಾಡಿದ ಸಿಎಂ, ನವೀನ್ ಮೃತದೇಹವನ್ನು ದೇಶಕ್ಕೆ ತರಿಸುವಲ್ಲಿ ತಮ್ಮ ಪಾತ್ರ ಬಹಳ ಮುಖ್ಯವಾಗಿತ್ತು. ಮಗನ ಮುಖ ನೋಡಬೇಕೆಂಬುದು ಅವರ ತಂದೆ ತಾಯಿ ಆಸೆಯಾಗಿತ್ತು. ಹೆತ್ತವರ ಕನಸನ್ನು ತಾವು ಈಡೇರಿಸಿದ್ದೀರಿ, ರಾಜ್ಯದ ಪರವಾಗಿ ತಮಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಬಳಿಕ ವಿದೇಶಾಂಗ ಸಚಿವ ಜೈಶಂಕರ್ ಅವರಿಗೂ ಸಿಎಂ ಕರೆ ಮಾಡಿ, ನವೀನ್ ಮೃತದೇಹ ಭಾರತಕ್ಕೆ ತರುವಲ್ಲಿ ತಮ್ಮ ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಆ ದೇಶದೊಂದಿಗೆ ನಿರಂತರ ಸಂಪರ್ಕ ಹಾಗೂ ಅವಿರತ ಪರಿಶ್ರಮದಿಂದ ನವೀನ್ ಮೃತದೇಹ ಭಾರತಕ್ಕೆ ಬರುವಂತಾಗಿದೆ. ಅಸಾಧ್ಯವಾದ ಕೆಲಸವನ್ನು ವಿದೇಶಾಂಗ ಸಚಿವರಾಗಿ ತಾವು ಮಾಡಿದ್ದೀರಿ. ಇದಕ್ಕೆ ನಾನು ನಿಮಗೆ ಕರ್ನಾಟಕದ ಜನತೆಯ ಪರವಾಗಿ ಕೃತಜ್ಞತೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

Last Updated : Mar 21, 2022, 8:49 PM IST

ABOUT THE AUTHOR

...view details