ಕರ್ನಾಟಕ

karnataka

ETV Bharat / state

ಸ್ನೇಹಿತ ರಾಜು ಪಾಟೀಲ್ ನಿಧನ: ಅಂತಿಮ ನಮನ ಸಲ್ಲಿಸಲು ನಾಳೆ ಹುಬ್ಬಳ್ಳಿಗೆ ಸಿಎಂ ಪ್ರಯಾಣ

ಹುಬ್ಬಳ್ಳಿಯಲ್ಲಿ ನಾಳೆ ರಾಜು ಪಾಟೀಲ್ ಅಂತ್ಯ ಸಂಸ್ಕಾರ ನಡೆಯಲಿದ್ದು, ಅಂತಿಮ ನಮನ ಸಲ್ಲಿಸಲು ಸಿಎಂ ತೆರಳುತ್ತಿದ್ದಾರೆ. ನಾಳೆ ಬೆಳಗ್ಗೆ 7.15 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿರುವ ಸಿಎಂ, ಸ್ನೇಹಿತನ ಪಾರ್ಥೀವ ಶರೀರದ ದರ್ಶನ ಮಾಡಿ ಅಂತಿಮ ನಮನ ಸಲ್ಲಿಕೆ ಮಾಡಲಿದ್ದಾರೆ

CM Bommai
ಬಸವರಾಜ ಬೊಮ್ಮಾಯಿ

By

Published : Sep 15, 2021, 11:54 PM IST

ಬೆಂಗಳೂರು: ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ್ ಅವರ ನಿಧನದ ಹಿನ್ನಲೆಯಲ್ಲಿ ನಾಳೆ ವಿಧಾನ ಮಂಡಲ ಕಲಾಪಕ್ಕೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಗೈರಾಗುತ್ತಿದ್ದು ಸ್ನೇಹಿತನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಗುರುವಾರ ಹುಬ್ಬಳ್ಳಿಗೆ ತೆರಳುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ನಾಳೆ ರಾಜು ಪಾಟೀಲ್ ಅಂತ್ಯ ಸಂಸ್ಕಾರ ನಡೆಯಲಿದ್ದು, ಅಂತಿಮ ನಮನ ಸಲ್ಲಿಸಲು ಸಿಎಂ ತೆರಳುತ್ತಿದ್ದಾರೆ. ಗುರುವಾರ ಬೆಳಗ್ಗೆ 7.15 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿರುವ ಸಿಎಂ, ಸ್ನೇಹಿತನ ಪಾರ್ಥೀವ ಶರೀರದ ದರ್ಶನ ಮಾಡಿ ಅಂತಿಮ ನಮನ ಸಲ್ಲಿಸಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಲಿದ್ದಾರೆ.

ರಾಜು ಪಾಟೀಲ್ ಒಬ್ಬ ಆಪ್ತ ಮಿತ್ರರಾಗಿದ್ದರು. ನಾವಿಬ್ಬರು ಬಾಲ್ಯದಿಂದ ಕೂಡಿಯೇ ಬೆಳೆದವರು. ನಾನು ಹುಬ್ಬಳ್ಳಿಯಲ್ಲಿ ಇದ್ದಾಗ ಅವರು ಸದಾ ನನ್ಮ ಜತೆ ಇರುತ್ತಿದ್ದರು. ಅವರ ಅಗಲಿಕೆ ನನಗೆ ಅತೀವ ದುಃಖ ತರಿಸಿದೆ. ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಅಂದುಕೊಂಡಿರಲಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಹೇಳಿದ್ದಾರೆ.

ಬೊಮ್ಮಾಯಿ ಇಡೀ ದಿನ ಹುಬ್ಬಳ್ಳಿಯಲ್ಲಿಯೇ ಇರಲಿರುವ ಸಿಎಂ ಬೊಮ್ಮಾಯಿ ರಾತ್ರಿ 8.30 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೊರಟು 9.55 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಲಿದ್ದಾರೆ.

ಇದನ್ನು ಓದಿ:ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿ ಮಂಡನೆ

ABOUT THE AUTHOR

...view details