ಬೆಂಗಳೂರು:ಹೈದರಾಬಾದ್ನಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನ ಚಾಮರಾಜಪೇಟೆಯಲ್ಲಿರುವ ಆರ್ಎಸ್ಎಸ್ ಕಚೇರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹಲವು ವಿಷಯಗಳ ಕುರಿತು ಸಂಘದ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ.
ಕೇಶವ ಕೃಪಾಗೆ ಸಿಎಂ ಬೊಮ್ಮಾಯಿ ಭೇಟಿ: ಸಂಘ ಪರಿವಾರದ ನಾಯಕರ ಜೊತೆ ಸಭೆ
ಜುಲೈ 2 ಮತ್ತು 3 ರಂದು ಹೈದರಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇದಕ್ಕೂ ಮುಂಚಿತವಾಗಿ ಸಿಎಂ ಬೊಮ್ಮಾಯಿ ಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದ್ರ ಜೊತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗೆಗೂ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ಸಿಎಂ ಬೊಮ್ಮಾಯಿ
ಸಂಘದ ಪ್ರಮುಖರಾದ ಸಿ.ಆರ್.ಮುಕುಂದ್ ಮತ್ತು ಸುಧೀರ್ ಅವರೊಂದಿಗೆ ಬಿಜೆಪಿ ಚುನಾವಣಾ ಸಮೀಕ್ಷೆಗಳಲ್ಲಿನ ಅಂಶಗಳು, ಆಡಳಿತಾತ್ಮಕ ವಿಚಾರಗಳು, ಪಠ್ಯ ಪರಿಷ್ಕರಣೆ ವಿವಾದ, ಬಿಬಿಎಂಪಿ ಚುನಾವಣೆ ಕುರಿತು ಸಿಎಂ ಚರ್ಚಿಸಿದರು. ಸಿಎಂಗೆ ಕೆಲವು ಮಹತ್ವದ ನಿರ್ದೇಶನಗಳನ್ನೂ ಆರ್‌ಎಸ್ಎಸ್ ನಾಯಕರು ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಉದಯ್ಪುರ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರ: ಸಿಎಂ ಬೊಮ್ಮಾಯಿ