ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇರಳದಲ್ಲಿ ಭಾರಿ ಮಳೆ, ಭೂ ಕುಸಿತ : ಕೇರಳ ಸಿಎಂಗೆ ನೆರವಿನ ಭರವಸೆ ನೀಡಿದ ಸಿಎಂ ಬೊಮ್ಮಾಯಿ - CM Bommai who promised
ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಸಂಪರ್ಕದಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ..
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇದೇ ವೇಳೆ ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಸಂಪರ್ಕದಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.