ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavararaja Bommai) ಅಧ್ಯಕ್ಷತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ (Goods and Service Tax) (ಜಿಎಸ್‌ಟಿ) ವ್ಯವಸ್ಥೆಯ ಅಡಿ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣ ಪರಿಶೀಲನಾ ಸಮಿತಿ ಸಭೆ ನಡೆಯಲಿದ್ದು, ಕೇಂದ್ರಕ್ಕೆ ವರದಿ ಸಲ್ಲಿಸುವ ಸಂಬಂಧ ಪೂರ್ವಭಾವಿ ಸಮಾಲೋಚನೆ ನಡೆಯಲಿದೆ.
ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್ ಸಭೆ ನಡೆಸಲಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆ ಅಡಿ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣ, ಜಿಎಸ್‌ಟಿಯಿಂದ ವಿನಾಯಿತಿ (Exemption from GST) ಪಡೆದಿರುವ ಉತ್ಪನ್ನಗಳ ಬಗ್ಗೆ ಪರಿಶೀಲಿಸಲು ಹಾಗೂ ತೆರಿಗೆ ವಂಚನೆ ಮೂಲಗಳನ್ನು ಗುರುತಿಸುವ ಸಮಿತಿ ಅಧ್ಯಕ್ಷರೂ ಆಗಿರುವ ಸಿಎಂ ಬೊಮ್ಮಾಯಿ, ಎಲ್ಲಾ ರಾಜ್ಯಗಳ ಹಣಕಾಸು ಸಚಿವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಜಿಎಸ್‌ಟಿ ಅಡಿ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣ, ಜಿಎಸ್‌ಟಿಯಿಂದ ವಿನಾಯಿತಿ ಪಡೆದಿರುವ ಉತ್ಪನ್ನಗಳ ಬಗ್ಗೆ ಪರಿಶೀಲಿಸಲು ಹಾಗೂ ತೆರಿಗೆ ವಂಚನೆ ಮೂಲಗಳನ್ನು ಗುರುತಿಸಲು ಕೇಂದ್ರ ಹಣಕಾಸು ಸಚಿವಾಲಯ (Ministry of Finance) ಎರಡು ಸಮಿತಿ ರಚಿಸಿದೆ. ರಾಜ್ಯಗಳ ಹಣಕಾಸು ಸಚಿವರು ಈ ಸಮಿತಿಗಳಲ್ಲಿ ಇರಲಿದ್ದಾರೆ.