ಬೆಂಗಳೂರು:ಪೇ ಸಿಎಂ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ದಾಖಲು ಮಾಡಲು ಹೇಳಿದ್ದೇನೆ. ಇದು ವ್ಯವಸ್ಥಿತ ಷಡ್ಯಂತ್ರ. ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಈ ರೀತಿ ಮಾಡಲಾಗಿದೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೇವೆಗೌಡರನ್ನು ಭೇಟಿ ಮಾಡಿ ವಾಪಸಾಗುವ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಸೋಷಿಯಲ್ ಮೀಡಿಯಾದಲ್ಲಿ ಆಧಾರರಹಿತವಾಗಿ ಅಭಿಯಾನ ಮಾಡಲಾಗ್ತಿದೆ. ಇದೆಲ್ಲಾ ಸುಡೋ ಕ್ಯಾಂಪೇನ್ಗಳು. ಇದರ ಬಗ್ಗೆ ಜನಕ್ಕೆ ಏನೂ ಗೊತ್ತಾಗಲ್ಲ ಎಂದು ಕಿಡಿಕಾರಿದರು.