ಕರ್ನಾಟಕ

karnataka

ETV Bharat / state

ಮಾಲಿನ್ಯ ನಿಯಂತ್ರಣ ಮಂಡಳಿ 'ಡಿಜಿಟಲ್' ಅಭಿಯಾನಕ್ಕೆ ಸಿಎಂ ಬಿಎಸ್​​ವೈ ಮೆಚ್ಚುಗೆ - ಪರಿಸರ ಗೀತೆ, ಯೂಟ್ಯೂಬ್ ಚಾನಲ್

ಇತ್ತೀಚೆಗೆ ಕೋವಿಡ್ 19ರ ನಿಯಂತ್ರಣಕ್ಕೆ ಲಾಕ್​ಡೌನ್​​ ಘೋಷಣೆ ಮಾಡಿದ್ದರಿಂದ ಪರಿಸರ ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿರುವುದು ಸಮಾಧಾನಕರ ಸಂಗತಿ ಎಂದು ಸಿ ಎಂ ಯಡಿಯೂರಪ್ಪ ಅಭಿಪ್ರಾಯಪಟ್ಟರು.

CM BS Y appreciates pollution control board's 'digital' campaign.
ಮಾಲಿನ್ಯ ನಿಯಂತ್ರಣ ಮಂಡಳಿಯ 'ಡಿಜಿಟಲ್' ಅಭಿಯಾನಕ್ಕೆ ಸಿಎಂ ಬಿಎಸ್​​ವೈ ಮೆಚ್ಚುಗೆ

By

Published : Jun 5, 2020, 1:07 PM IST

ಬೆಂಗಳೂರು: ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಪರಿಸರ ದಿನದ ವಿಷಯ “ಜೀವ ವೈವಿಧ್ಯ”. ವೈವಿಧ್ಯತೆ ಇದ್ದಾಗ ಮಾತ್ರ ಪರಿಸರ ಸಮತೋಲನ ಕಾಪಾಡಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಂತರ ಮಾತು ಮುಂದುವರೆಸಿದ ಅವರು, ಇತ್ತೀಚೆಗೆ ಕೋವಿಡ್ 19ರ ನಿಯಂತ್ರಣಕ್ಕೆ ಲಾಕ್​ಡೌನ್​​ ಘೋಷಣೆ ಮಾಡಿದ್ದರಿಂದ ಪರಿಸರ ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿರುವುದು ಸಮಾಧಾನಕರ ಸಂಗತಿ ಎಂದರು.

ಸಮಾರಂಭದಲ್ಲಿ ಪರಿಸರ ಗೀತೆ, ಯೂಟ್ಯೂಬ್ ಚಾನಲ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರ ಸ್ನೇಹಿ ವೆಬ್​ಸೈಟ್​ಗೆ ಚಾಲನೆ ನೀಡಲಾಯಿತು. ಅರಣ್ಯ ಸಚಿವ ಆನಂದ್ ಸಿಂಗ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಿಜಯ್ ಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಮೊದಲಾದವರು ಉಪಸ್ಥಿತರಿದ್ದರು.

ABOUT THE AUTHOR

...view details