ಬೆಂಗಳೂರು: ಗುಜರಾತ್ ರಾಜ್ಯದ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಗುಜರಾತ್ ಸಿಎಂ ವಿಜಯ್ ರೂಪಾನಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಬಿಎಸ್ವೈ..! - Gujrat CM Vijay Roopani's birthday
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಟ್ವಿಟ್ಟರ್ನಲ್ಲಿ ಶುಭಾಶಯ ಕೋರಿದ ಅವರು, ಗೌರವಾನ್ವಿತ ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಇನ್ನಷ್ಟು ವರ್ಷಗಳ ಕಾಲ ದೇಶಕ್ಕೆ ಸೇವೆ ಸಲ್ಲಿಸುವಂತಾಗಲಿ ಎಂದು ಸಿಎಂ ಬಿಎಸ್ವೈ ಹಾರೈಸಿದ್ದಾರೆ.
ಇದೇ ವೇಳೆ ಮಾಜಿ ಸಂಸದ ವಿಜಯ್ ಸಂಕೇಶ್ವರ್ ಅವರ ಹುಟ್ಟುಹಬ್ಬಕ್ಕೂ ಸಿಎಂ ಶುಭ ಕೋರಿದ್ದಾರೆ. ಖ್ಯಾತ ಉದ್ಯಮಿಗಳು, ಮಾಜಿ ಸಂಸದರು ಮತ್ತು ನನ್ನ ಆತ್ಮೀಯರೂ ಆದ ಶ್ರೀ ವಿಜಯ್ ಸಂಕೇಶ್ವರ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.