ಬೆಂಗಳೂರು: ಕೋವಿಡ್ ಎರಡನೇ ಅಲೆ ಹಿನ್ನೆಲೆ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ನಿರ್ಬಂಧ ಸಡಿಲಿಕೆಯ ಅನ್ಲಾಕ್ 2.O ಜುಲೈ 5ಕ್ಕೆ ಅಂತ್ಯಗೊಳ್ಳಲಿದೆ. ಅನ್ಲಾಕ್ 3.O ಕುರಿತು ಕೋವಿಡ್ ಉಸ್ತುವಾರಿ ಸಚಿವರು ಹಾಗು ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಮಹತ್ವದ ಸಭೆ ನಡೆಸಲಿದ್ದಾರೆ.
ಶುಕ್ರವಾರ ಸಂಜೆ 5.30ಕ್ಕೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ಮೂರನೇ ಹಂತದ ಲಾಕ್ಡೌನ್ ಸಡಿಲಿಕೆ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಯಾವೆಲ್ಲ ವರ್ಗಕ್ಕೆ ಲಾಕ್ಡೌನ್ ಸಡಲಿಕೆ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.