ಕರ್ನಾಟಕ

karnataka

ETV Bharat / state

ಇನ್ನೆರಡು ದಿನಗಳಲ್ಲಿ ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ: ಸಿಎಂ - cm yadiyurappa latest news

ಎರಡನೇ ಪ್ಯಾಕೇಜ್ ಕುರಿತು ಸಿದ್ಧತೆ ನಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇವೆ. ಜೂನ್ 5, 6ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಲಾಕ್​​ಡೌನ್​ ಕುರಿತು ನಿರ್ಧಾರ ಮಾಡುತ್ತೇವೆಂದು ಸಿಎಂ ಬಿಎಸ್​ವೈ ತಿಳಿಸಿದರು.

cm bs yadiyurappa
ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ

By

Published : May 30, 2021, 11:28 AM IST

Updated : May 30, 2021, 12:18 PM IST

ಬೆಂಗಳೂರು: ಇನ್ನೆರಡು ದಿನಗಳಲ್ಲಿ ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕಾವೇರಿ ನಿವಾಸದಲ್ಲಿ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಬಳಿಕ ಮಾತನಾಡಿದ ಅವರು, ಎರಡನೇ ಪ್ಯಾಕೇಜ್ ಕುರಿತು ಸಿದ್ಧತೆ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.​​ ಯಡಿಯೂರಪ್ಪ

ಲಾಕ್​​ಡೌನ್​ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಜೂನ್ 5, 6ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡುತ್ತೇವೆ. ತಜ್ಞರ ಜತೆ, ಸಚಿವರ ಜತೆ ಚರ್ಚಿಸಿ ನಿರ್ಧಾರ ಕೈಗೊಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಜಾಸ್ತಿಯೇ ಇದೆ. ಲಾಕ್‌ಡೌನ್ ವಿಸ್ತರಣೆ ಮಾಡಿ ಅಂತಾ ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಲಾಕ್‌ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳಲ್ಲಿ ದಿಢೀರ್ ಇನ್‌ಆಕ್ಟಿವ್ ಆದ ಸಚಿವ ಸುರೇಶ್ ಕುಮಾರ್, ಚಾಮರಾಜನಗರ ಡಿಸಿ

Last Updated : May 30, 2021, 12:18 PM IST

ABOUT THE AUTHOR

...view details