ಕರ್ನಾಟಕ

karnataka

ETV Bharat / state

ವ್ಯಾಯಾಮ ಮಾಡಿ ಕೆಎಎಸ್​ ಅಧಿಕಾರಿಗಳ ಸಂಘದ ಜಿಮ್ ಉದ್ಘಾಟಿಸಿದ ಸಿಎಂ ಬಿ ಎಸ್ ಯಡಿಯೂರಪ್ಪ - KAS officers

ರಾಜ್ಯದ ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ಕೆಎಎಸ್ ಅಧಿಕಾರಿಗಳು ತಮ್ಮ ಕೊಡುಗೆ ನೀಡುತ್ತಾ ಬಂದಿದ್ದಾರೆ. ಸರ್ಕಾರದ ಆಡಳಿತ ಯಂತ್ರವನ್ನು ಸುಗಮವಾಗಿ ನಿರ್ವಹಿಸಲು ಹಾಗೂ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಲ್ಲಿ ಅಧಿಕಾರಿಗಳು ಮಹತ್ವದ ಪಾತ್ರ ವಹಿಸುತ್ತಾರೆ..

dsd
ಜಿಮ್ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ

By

Published : Jan 8, 2021, 10:17 PM IST

Updated : Jan 8, 2021, 10:53 PM IST

ಬೆಂಗಳೂರು :ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದಲ್ಲಿರುವ ನೂತನವಾಗಿ ನಿರ್ಮಿಸಿರುವ ಜಿಮ್‌ನವ್ಯಾಯಾಮ ಮಾಡುವ ಮೂಲಕ ಉದ್ಘಾಟಿಸಿದರು. ಶತಮಾನೋತ್ಸವ ಭವನದ ಶಂಕುಸ್ಥಾಪನೆ ಮತ್ತು 2021ರ ದಿನಚರಿಯನ್ನೂ ಮುಖ್ಯಮಂತ್ರಿಗಳು ಇದೇ ವೇಳೆ ಬಿಡುಗಡೆ ಮಾಡಿದರು.

ವ್ಯಾಯಾಮ ಮಾಡಿ ಕೆಎಎಸ್​ ಅಧಿಕಾರಿಗಳ ಸಂಘದ ಜಿಮ್ ಉದ್ಘಾಟಿಸಿದ ಸಿಎಂ ಬಿ ಎಸ್ ಯಡಿಯೂರಪ್ಪ

ನಂತರ ಮಾತನಾಡಿದ ಬಿಎಸ್​ವೈ, ಆಡಳಿತ ಸೇವೆ ಪ್ರಾರಂಭವಾಗಿ 100 ವರ್ಷಗಳು ಸಂದಿರುವ ಸಂದರ್ಭದಲ್ಲಿ ಸಂಘದ ವತಿಯಿಂದ ಶತಮಾನೋತ್ಸವ ಭವನದ ನಿರ್ಮಾಣಕ್ಕೆ ಮುಂದಾಗಿರುವುದು ಅತ್ಯಂತ ಔಚಿತ್ಯಪೂರ್ಣ.

ರಾಜ್ಯದ ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ಕೆಎಎಸ್ ಅಧಿಕಾರಿಗಳು ತಮ್ಮ ಕೊಡುಗೆ ನೀಡುತ್ತಾ ಬಂದಿದ್ದಾರೆ. ಸರ್ಕಾರದ ಆಡಳಿತ ಯಂತ್ರವನ್ನು ಸುಗಮವಾಗಿ ನಿರ್ವಹಿಸಲು ಹಾಗೂ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಲ್ಲಿ ಅಧಿಕಾರಿಗಳು ಮಹತ್ವದ ಪಾತ್ರ ವಹಿಸುತ್ತಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ‘ಫಿಟ್ ಇಂಡಿಯಾ’ ಅಭಿಯಾನಕ್ಕೆ ಚಾಲನೆ ನೀಡಿರುವುದು ನಮಗೆಲ್ಲ ತಿಳಿದಿರುವ ವಿಷಯ. ಒತ್ತಡ ನಿವಾರಣೆ, ದೈಹಿಕ ಕ್ಷಮತೆ ಕಾಯ್ದುಕೊಳ್ಳಲು ಹಾಗೂ ಆರೋಗ್ಯ ವೃದ್ಧಿಗೆ ಜಿಮ್ ಸಹಕಾರಿಯಾಗಲಿದೆ. ಸರ್ಕಾರದ ಜನಪರ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನವನ್ನು ಅಧಿಕಾರಿಗಳು ಮಾಡಬೇಕು ಎಂದರು.

Last Updated : Jan 8, 2021, 10:53 PM IST

ABOUT THE AUTHOR

...view details