ಬೆಂಗಳೂರು:ಮರಾಠಿ ಮಾತನಾಡುವ ಜನರು ಬಹುಸಂಖ್ಯೆಯಲ್ಲಿರುವ ಕರ್ನಾಟಕದ ಪ್ರದೇಶಗಳನ್ನು ರಾಜ್ಯಕ್ಕೆ ಸೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಇದು ಹುತಾತ್ಮರಿಗೆ ಸಲ್ಲಿಸುವ "ನಿಜವಾದ ಗೌರವ" ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.
ಇದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದು, ರಾಜ್ಯದ ಒಂದಿಂಚೂ ಭೂಮಿ ನೀಡಲ್ಲ ಎಂದು ಗುಡುಗಿದ್ದಾರೆ.