ಕರ್ನಾಟಕ

karnataka

ETV Bharat / state

ದಸರಾ ಉದ್ಘಾಟನೆಗೆ ಒಂದು ದಿನ ಮೊದಲೇ ಮೈಸೂರಿಗೆ ಹೊರಡಲಿರುವ ಸಿಎಂ ಬಿಎಸ್​ವೈ - ಬೆಂಗಳೂರು ಸುದ್ದಿ

ಅಕ್ಟೋಬರ್ 16ರಂದು ಸಂಜೆ 5.30ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಿಎಂ ಯಡಿಯೂರಪ್ಪ ಮೈಸೂರಿಗೆ ಪ್ರಯಾಣಿಸಲಿದ್ದಾರೆ.

CM BS Yeddyurappa tour to Mysore
ಮೈಸೂರಿಗೆ ಸಿಎಂ ಪ್ರವಾಸ

By

Published : Oct 14, 2020, 6:56 PM IST

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಒಂದು ದಿನ ಮೊದಲೇ ಮೈಸೂರಿಗೆ ತೆರಳಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಕೋವಿಡ್-19 ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಅಕ್ಟೋಬರ್ 16ರಂದು ಸಂಜೆ 5.30ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಪ್ರಯಾಣಿಸಲಿದ್ದು, ಸಂಜೆ 6.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಕೊರೊನಾ ನಿಯಂತ್ರಣ ಕುರಿತು ಸಭೆ ನಡೆಸಲಿದ್ದಾರೆ. ನಂತರ ನಾಡಹಬ್ಬ ದಸರಾ ಆಚರಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಭೆ ನಡೆಸಲಿದ್ದಾರೆ.

ಅಕ್ಟೋಬರ್ 17ರಂದು ಬೆಳಗ್ಗೆ 7.45ಕ್ಕೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಮತ್ತು ಅಗ್ರ ಪೂಜೆಯೊಂದಿಗೆ ದಸರಾ ಉತ್ಸವದ ಉದ್ಘಾಟನೆಯಲ್ಲಿ ಭಾಗಿಯಾಗಲಿರುವ ಸಿಎಂ, ಬೆಳಗ್ಗೆ 10 ಗಂಟೆಗೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು 10.35ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ABOUT THE AUTHOR

...view details