ಬೆಂಗಳೂರು: ಹೆಸರಾಂತ ವಿಜ್ಞಾನಿ ಭಾರತ ರತ್ನ ಪ್ರೊ.ಸಿ ಎನ್ ಆರ್ ರಾವ್ ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಪ್ರೊ. ಸಿಎನ್‌ಆರ್ ರಾವ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಯಡಿಯೂರಪ್ಪ.. - ಪ್ರೊ. ಸಿಎನ್‌ಆರ್ ರಾವ್
ಜಾಗತಿಕ ಮಟ್ಟದಲ್ಲಿ ಪ್ರಸಿದ್ದಿ ಹೊಂದಿ ಭಾರತ ರತ್ನ ಪ್ರೊ.ಸಿ.ಎನ್.ಆರ್ ರಾವ್ ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ಕೋರಿದ್ದು, ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ..
ವಿಜ್ಞಾನದಲ್ಲಿನ ತಮ್ಮ ಅಪಾರ ಪಾಂಡಿತ್ಯದ ಕಾರಣದಿಂದ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧವಾಗಿರುವ ರಾವ್ ಅವರು, ಹಲವು ವೈಜ್ಞಾನಿಕ ಸಂಸ್ಥೆಗಳನ್ನು ಮುನ್ನಡೆಸಿದ್ದಾರೆ. ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ನೂರಾರು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುವ ಸಿಎನ್ಆರ್, ಜಾಗತಿಕ ಮಟ್ಟದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಂದ ಗೌರವ ಡಾಕ್ಟರೇಟ್ ಪದವಿಗಳನ್ನು ಪಡೆದಿದ್ದಾರೆ.
ವಿಜ್ಞಾನ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ದೇವರು ಅವರಿಗೆ ಆಯುರಾರೋಗ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.