ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ.
ಸಂಜೆ ಡಿಸಿ, ಎಸ್ಪಿಗಳ ಜೊತೆ ಸಿಎಂ ತುರ್ತು ವಿಡಿಯೋ ಕಾನ್ಫರೆನ್ಸ್ ಸಭೆ - ಬಿ.ಎಸ್.ಯಡಿಯೂರಪ್ಪ ಲೇಟೆಸ್ಟ್ ನ್ಯೂಸ್
ಇಂದು ಸಂಜೆ 04 ಗಂಟೆಗೆ ಸಿಎಂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ತುರ್ತು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.
ಡಿಸಿ,ಎಸ್ಪಿಗಳ ತುರ್ತು ವೀಡಿಯೋ ಕಾನ್ಫರೆನ್ಸ್ ಸಭೆ ಕರೆದ ಸಿಎಂ
ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಂಜೆ 4 ಗಂಟಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಚರ್ಚೆ ನಡೆಸಲಿದ್ದಾರೆ. ಕೊರೊನಾ ಕುರಿತಂತೆ ಜಿಲ್ಲೆಗಳಲ್ಲಿ ತಗೆದುಕೊಂಡ ಕ್ರಮಗಳ ಬಗ್ಗೆ ಸ್ವತಃ ಸಿಎಂ ಜಿಲ್ಲಾಧಿಕಾರಿಗಳು ಹಾಗೂ ಎಸ್ಪಿ ಗಳಿಂದ ಮಾಹಿತಿ ಪಡೆಯಲಿದ್ದು, ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.
ಸಿಎಂ ಜೊತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ , ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.