ಬೆಂಗಳೂರು:ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಯನ್ನು ಮುಂದುವರೆಸಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಇಂದು 2021-22ನೇ ಸಾಲಿನ ಆಯವ್ಯಯ ಮಂಡಿಸಿದ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಜಾರಿಗೆ ತಂದ ‘ಅನುಗ್ರಹ ಯೋಜನೆ’ ಮುಂದುವರೆಸುವುದಾಗಿ ಘೋಷಿಸಿದ್ದಾರೆ.

ಕುರಿಗಳು ಸತ್ತರೆ 5000 ರೂ. ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ರಾಜ್ಯ ಸರ್ಕಾರ ಈ ಹಿಂದೆ ಹಿಂಪಡೆದಿತ್ತು. ರಾಜ್ಯ ಸರ್ಕಾರದ ಈ ನಿರ್ಣಯ ವಿರೋಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಕ್ಕೆ ಮಣಿದಿರುವ ಸಿಎಂ ಬಿಎಸ್‌ವೈ, ಅನುಗ್ರಹ ಯೋಜನೆಗೆ ಅನುದಾನ ಮೀಸಲಿಡುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಇದನ್ನೂ ಓದಿ;ರಾಜ್ಯದಲ್ಲಿ ಹೊಸದಾಗಿ 52 ಬಸ್ ನಿಲ್ದಾಣ, 16 ಡಿಪೊ ನಿರ್ಮಾಣ
ಪ್ರಕೃತಿ ವಿಕೋಪ ಹಾಗೂ ಅಪಘಾತದಲ್ಲಿ ಕುರಿಗಳು ಸಾವಿಗೀಡಾದರೆ ತಲಾ 5000 ರೂ. ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಗೊಳಿಸಲಾಗಿತ್ತು. ದನ ಮತ್ತು ಎಮ್ಮೆಗಳು ಸತ್ತರೆ 10,000 ರೂ. ಪರಿಹಾರ ನೀಡಲಾಗುತ್ತಿತ್ತು.