ಕರ್ನಾಟಕ

karnataka

ETV Bharat / state

ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಬಿಎಸ್​ವೈ! - ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಬಿಎಸ್​ವೈ

ಹಿರಿಯ ರಾಜಕಾರಣಿ, ಸಂಸದರು ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು, ದೇವರು ನಿಮಗೆ ಉತ್ತಮ ಆರೋಗ್ಯವನ್ನು, ದೀರ್ಘಾಯುಷ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

CM BS Yediyurappa
ಸಿಎಂ ಬಿಎಸ್ವೈ

By

Published : Jul 21, 2020, 3:20 PM IST

ಬೆಂಗಳೂರು: ಕಾಂಗ್ರೆಸ್​ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಪುಟ ಸಹೋದ್ಯೋಗಿಗಳು ಜನ್ಮದಿನದ ಶುಭಾಶಯ ಕೋರಿದ್ದಾರೆ.

ಹಿರಿಯ ರಾಜಕಾರಣಿ, ಅಪ್ರತಿಮ ಸಂಸದೀಯ ಪಟು, ರಾಜ್ಯಸಭೆ ಸದಸ್ಯ, ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ತಮ್ಮ ಅನುಕರಣೀಯ ಸಾರ್ವಜನಿಕ ಸೇವೆ ಸುದೀರ್ಘ ರಾಜಕೀಯ ಜೀವನಾನುಭವ ಎಲ್ಲ ಪೀಳಿಗೆಗೂ ಅಗತ್ಯವಾಗಿದ್ದು, ದೇವರು ನಿಮಗೆ ಆಯುರಾರೋಗ್ಯ ನೀಡಿ ಹರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಹಿರಿಯ ನಾಯಕ, ಮಾಜಿ ಸಚಿವ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಕಾಲ ನಾಡಿನ ಸೇವೆ ಮಾಡುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details