ಯೋಗೇಶ್ವರ್ಗೆ ‘ಮಂತ್ರಿ’ ಮಣೆ: ವಿರೋಧದ ನಡುವೆಯೂ ಸ್ಥಾನ ಖಚಿತಪಡಿಸಿದ ಬಿಎಸ್ವೈ
10:56 December 01
ಸಿ.ಪಿ. ಯೋಗೇಶ್ವರ್ ಬಯಕೆಯಂತೆ ಮಂತ್ರಿ ಸ್ಥಾನ ಪಡೆಯುವುದು ಖಚಿತವಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು, ಯೋಗೇಶ್ವರ್ಗೆ ನೂರಕ್ಕೆ ನೂರು ಮಂತ್ರಿ ಸ್ಥಾನ ನೀಡಲಿದ್ದೇವೆ ಎಂದಿದ್ದಾರೆ.
ಬೆಂಗಳೂರು:ನೂರಕ್ಕೆ ನೂರರಷ್ಟು ಸಿ.ಪಿ. ಯೋಗೇಶ್ವರ್ ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಖಚಿತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿ.ಪಿ. ಯೋಗೇಶ್ವರ್ ಪರ ಬ್ಯಾಟ್ ಬೀಸಿದ್ದು, ಸಂಪುಟದಲ್ಲಿ ಮಂತ್ರಿ ಸ್ಥಾನ ಖಚಿತ ಎಂದಿದ್ದಾರೆ.
ಸ್ವಪಕ್ಷೀಯರ ವಿರೋಧದ ಮಧ್ಯೆಯೂ ಸಿ.ಪಿಯೋಗೇಶ್ವರ್ಗೆ ಮಂತ್ರಿ ಸ್ಥಾನ ಕೊಟ್ಟೇ ಕೊಡುತ್ತೇವೆ ಎಂದು ಬಿಎಸ್ವೈ ಸ್ಪಷ್ಟಪಡಿಸಿದ್ದಾರೆ.
ಈ ಮೊದಲು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕ ರಾಜುಗೌಡ ಸೇರಿದಂತೆ ಕೆಲ ಬಿಜೆಪಿ ಶಾಸಕರ ಬಣ ಸಿ.ಪಿ. ಯೋಗೇಶ್ವರ್ಗೆ ಮಂತ್ರಿ ಸ್ಥಾನ ನೀಡದಂತೆ ಬಲವಾಗಿ ವಿರೋಧ ವ್ಯಕ್ತಪಡಿಸಿದ್ದರು. ತಮ್ಮ ಆಪ್ತರ ವಿರೋಧದ ಮಧ್ಯೆಯೂ ಇದೀಗ ಬಿಎಸ್ವೈ ಅವರು ಸಿ.ಪಿ. ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುವುದನ್ನು ಖಚಿತಪಡಿಸಿದ್ದಾರೆ.