ಬೆಂಗಳೂರು :ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸ ಕಾವೇರಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಭೇಟಿ ನೀಡಿ ಕೆಲಕಾಲ ಮಾತುಕತೆ ನಡೆಸಿದರು. ಕೊರೊನಾ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ಖುಷಿ ಖುಷಿಯಾಗಿ ಕೆಲಕಾಲ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಯಡಿಯೂರಪ್ಪರನ್ನು ಭೇಟಿಯಾಗುತ್ತಿದ್ದಂತೆ ಸಂಪುಟ ಸಹೋದ್ಯೋಗಿಗೆ ಹುಟ್ಟುಹಬ್ಬದ ಶುಭ ಕೋರಿದರು. ನಂತರ ಬಿಎಸ್ವೈರಿಂದ ಸುಧಾಕರ್ ಆಶೀರ್ವಾದ ಪಡೆದುಕೊಂಡರು. ನಂತರ ಕೆಲ ಸಮಯ ಕೋವಿಡ್ ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಿದ ಅವರು, ಬ್ಲಾಕ್ ಫಂಗಸ್, ವೈಟ್ ಫಂಗಸ್ ನಂತರ ರಾಜ್ಯದಲ್ಲಿ ಗ್ರೀನ್ ಫಂಗಸ್ ಕಾಣಿಸಿಕೊಂಡಿದ್ದು, ಈ ಬಗ್ಗೆಯೂ ನಿಗಾವಹಿಸುವ ಸಂಬಂಧ ಮಾತುಕತೆ ನಡೆಸಲಾಯಿತು ಎನ್ನಲಾಗಿದೆ.