ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ರೂ. ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಕೋವಿಡ್ 19 ಬಿಕ್ಕಟ್ಟ ಅನ್ನು ಸಮರ್ಥವಾಗಿ ಎದುರಿಸಲು, ಆರ್ಥಿಕತೆಗೆ ಶಕ್ತಿ ತುಂಬಲು ಮತ್ತು ಸಂಕಷ್ಟ ಎದುರಿಸುತ್ತಿರುವ ಎಲ್ಲ ವರ್ಗಗಳ ಜನತೆಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ. ಮೊತ್ತದ (ಜಿಡಿಪಿಯ ಶೇ10ರಷ್ಟು) ಅಭೂತಪೂರ್ವ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟ್ವೀಟ್ ಎದುರಾಗಿರುವ ಸವಾಲನ್ನು ಅವಕಾಶವನ್ನಾಗಿ ಪರಿವರ್ತಿಸಿ, ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ವಸುಧೈವ ಕುಟುಂಬಕಂ ಪರಿಕಲ್ಪನೆಯ ಸದೃಢ ಸಾಮಾಜಿಕ ವ್ಯವಸ್ಥೆಯನ್ನು ಸಾಕಾರಗೊಳಿಸಲು, ಪ್ರಧಾನಿ ಮೋದಿ ಅವರು ಕರೆ ನೀಡಿರುವ ಆತ್ಮ ನಿರ್ಭರ ಭಾರತ ಅಭಿಯಾನ ಸಮಸ್ತ ಭಾರತೀಯರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಇನ್ನೊಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಹಲವ ಬಿಜೆಪಿ ಮುಖಂಡರು ಟ್ವೀಟ್ ಮಾಡಿ ಪಿಎಂ ಮೋದಿ ಅವರ ನಿರ್ಧಾರ ಸ್ವಾಗತಿಸಿದ್ದಾರೆ.