ಕರ್ನಾಟಕ

karnataka

ETV Bharat / state

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಜಯಂತ್ಯುತ್ಸವ: ವರ್ಚುವಲ್ ಕಾನ್ಫರೆನ್ಸ್ ಮೂಲಕ ಸಿಎಂ ಭಾಗಿ

ಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 105ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ವರ್ಚುವಲ್ ಕಾನ್ಫರೆನ್ಸ್ ಮುಖಾಂತರ ಭಾಗಿಯಾದರು.

yadiyurappa
yadiyurappa

By

Published : Aug 29, 2020, 12:37 PM IST

ಬೆಂಗಳೂರು: ಸಿಎಂ ಯಡಿಯೂರಪ್ಪ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ‌ ವರ್ಚುವಲ್ ಕಾನ್ಫರೆನ್ಸ್ ಮುಖಾಂತರ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 105ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಠದ ಸಾಧನೆಗಳನ್ನು ಬಿಂಬಿಸುವ ಕೃತಿಗಳು ಹಾಗೂ ಆನಿಮೇಷನ್ ಚಿತ್ರಗಳನ್ನು ಬಿಡುಗಡೆಗೊಳಿಸಿದರು.

ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದ ಅವರು, ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 105ನೇ ಜಯಂತಿ ಉತ್ಸವದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ. ಮಹಾನ್ ಸಂತರು, ಮಹರ್ಷಿಗಳು, ತತ್ವಜ್ಞಾನಿಗಳು, ಶರಣರು, ದಾಸವೇರಣ್ಯರು ತಮ್ಮ ಬದುಕನ್ನು ಮಾನವನ ಉದ್ಧಾರಕ್ಕಾಗಿ ಮುಡಿಪಾಗಿಸಿ ಮಹಾಬೆಳಕಾದರು. ಇಂತಹ ಮಹಾನ್ ಸಂತರಲ್ಲಿ ಒಬ್ಬರಾದ ನಮ್ಮ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರು ಲೋಕ ಕಲ್ಯಾಣಕ್ಕಾಗಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

ವರ್ಚುವಲ್ ಕಾನ್ಫರೆನ್ಸ್ ಮೂಲಕ ಸಿಎಂ ಬಿಎಸ್​ವೈ ಭಾಗಿ

ಅನ್ನ, ಅರಿವು, ಆರೋಗ್ಯ, ಸಮಾಜ ಸುಧಾರಣೆ, ಧರ್ಮ ಜಾಗೃತಿ, ಆಧ್ಯಾತ್ಮ ಕ್ಷೇತ್ರದಲ್ಲಿ ಜಗದ್ಗುರುಗಳು ಭದ್ರ ಬುನಾದಿ ಹಾಕಿದ್ದಾರೆ. ಜೆ.ಎಸ್.ಎಸ್ ಮಹಾವಿದ್ಯಾ ಪೀಠವನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ವಸತಿ ಸಹಿತ ಶಿಕ್ಷಣ ನೀಡುವ ಮಹತ್ಕಾರ್ಯವನ್ನು ಮಠದ ವತಿಯಿಂದ ಮಾಡಲಾಗುತ್ತಿದೆ ಎಂದರು.

ಮಠದ ಅನ್ನ ದಾಸೋಹ, ಜ್ಞಾನ ದಾಸೋಹದಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ರೀಗಳ ಮಾರ್ಗದರ್ಶನದಲ್ಲಿ ನಿರಂತರವಾಗಿ ನಡೆದುಕೊಂಡು ಬಂದಿರುವುದು ಶ್ಲಾಘನೀಯ. ಶತಮಾನಗಳಿಂದ ದೀನ ದಲಿತರು ಎಂಬ ಭೇದ ಭಾವವಿಲ್ಲದೆ ದಾಸೋಹ ನಡೆಸಿ ಸಮ ಸಮಾಜದ ನಿರ್ಮಾಣಕ್ಕೆ ಶ್ರೀ ಮಠ ಶ್ರಮಿಸಿದೆ. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಇನ್ನೂ ಹೆಚ್ಚು ಹೆಚ್ಚಾಗಿ ನಡೆಯಬೇಕು ಎನ್ನುವುದು ನನ್ನ ಆಶಯ ಎಂದರು.

ABOUT THE AUTHOR

...view details