ಕರ್ನಾಟಕ

karnataka

ETV Bharat / state

ಕರ್ನಾಟಕದಲ್ಲಿ ಕೈ ಮೀರಿದ ಕೊರೊನಾ: ತುರ್ತು ಸಭೆ ಕರೆದ ಸಿಎಂ ಬಿಎಸ್​ವೈ - CM Yeddyurappa called emergency meeting regarding corona control news

ರಾಜ್ಯದ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದರೂ ಅಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಇಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೊರೊನಾ ತುರ್ತು ಸಭೆ ಕರೆದಿದ್ದಾರೆ.

CM Yeddyurappa  called emergency meeting regarding corona control
ತುರ್ತು ಸಭೆ ಕರೆದ ಸಿಎಂ ಬಿಎಸ್​

By

Published : Apr 16, 2021, 9:20 AM IST

Updated : Apr 16, 2021, 10:18 AM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ತಪ್ಪುತ್ತಿರುವ ಕಾರಣ ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಇಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ.

ಬೆಳಗಾವಿ ಪ್ರವಾಸದಿಂದ ವಾಪಸ್ಸಾಗಿರುವ ಸಿಎಂ ಇಂದು ಯಾವುದೇ ಪೂರ್ವನಿಗದಿ ಸಭೆ, ಸಮಾರಂಭಗಳನ್ನು ಒಪ್ಪಿಕೊಳ್ಳದೆ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದರು. ಆದರೆ ಕೊರೊನಾ ಸ್ಫೋಟಗೊಳ್ಳುತ್ತಿರುವ ಕಾರಣ ಇಂದು ಬೆಳಗ್ಗೆ 9.30ಕ್ಕೆ ಕೊರೊನಾ ಸಂಬಂಧ ತುರ್ತು ಸಭೆ ಕರೆದಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕೋವಿಡ್ 2ನೇ ಅಲೆ ಮಿಂಚಿನ ಸಂಚಾರ: 10,497 ಸೋಂಕಿತರು ಪತ್ತೆ

ರಾಜ್ಯದ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದರೂ ಅಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಬೆಂಗಳೂರು ನಗರದಲ್ಲಿ ದಿನವೊಂದಕ್ಕೆ 10 ಸಾವಿರಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಸೋಂಕಿತರ ಸಾವಿನ ಸಂಖ್ಯೆಯೂ ಆತಂಕ ಮೂಡಿಸಿದೆ. ಈ ಎಲ್ಲಾ ಕಾರಣಗಳಿಂದಾಗಿ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಮುಂದೇನು ಮಾಡಬೇಕೆನ್ನುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ಆರೋಗ್ಯ ಸಚಿವ ಡಾ.ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ವಲಯವಾರು ಉಸ್ತುವಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Last Updated : Apr 16, 2021, 10:18 AM IST

ABOUT THE AUTHOR

...view details