ಕರ್ನಾಟಕ

karnataka

ETV Bharat / state

ಕೇಂದ್ರ ಸಚಿವ ಶ್ರೀಪಾದ ನಾಯಕ್ ಪತ್ನಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ - death of Union Minister Sripada Nayak's wife

ವಿಜಯಾ ನಾಯಕ್ ಅವರ ನಿಧನ ಅತ್ಯಂತ ದುರದೃಷ್ಟಕರ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಈ ಆಘಾತವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

CM BSY condoles the death of Union Minister Sripada Nayak's wife
ನಾಯಕ್ ಪತ್ನಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

By

Published : Jan 12, 2021, 4:07 AM IST

ಬೆಂಗಳೂರು: ಅಂಕೋಲಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರ ಪತ್ನಿ ವಿಜಯಾ ನಾಯಕ್ ನಿಧನ ಹೊಂದಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಜಯಾ ನಾಯಕ್ ಅವರ ನಿಧನ ಅತ್ಯಂತ ದುರದೃಷ್ಟಕರ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಈ ಆಘಾತವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿರುವ ಸಚಿವ ನಾಯಕ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ.ಸಚಿವರಿಗೆ ಎಲ್ಲ ಅಗತ್ಯ ನೆರವು ನೀಡುವ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details