ಬೆಂಗಳೂರು: ರಾಜ್ಯದ ನೆರೆಪೀಡಿತ ಪ್ರದೇಶಗಳ ವಾಸ್ತವಿಕ ಅಧ್ಯಯನ ನಡೆಸಿದ ನಂತರ ಕೇಂದ್ರ ಸರ್ಕಾರಕ್ಕೆ ಪರಿಹಾರ ಕೋರಿ ವರದಿ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 5 ಜಿಲ್ಲೆಗಳ ನೆರೆ ಹಾನಿ ಬಗ್ಗೆ ವೈಮಾನಿಕ ಸಮೀಕ್ಷೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳಲಿದ್ದಾರೆ.
ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶದಲ್ಲಿಂದು ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ
ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಪ್ರವಾಹದಿಂದಾಗಿ ಕೋಟ್ಯಂತರ ರೂಪಾಯಿ ಹಾನಿ ಸಂಭವಿಸಿದೆ. ಹೀಗಾಗಿ ಇಂದು ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಬಳಿಕ ವರದಿಯನ್ನು ಕೇಂದ್ರಕ್ಕೆ ರವಾನಿಸಲಿದ್ದಾರೆ.
ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ತೆರಳುತ್ತಿದ್ದು, ಸಿಎಂ ಬಿಎಸ್ವೈ ಜೊತೆ ಗೃಹ ಸಚಿವ ಬಸವರಾಜ್ ಬೊಮ್ಮೊಯಿ ಮತ್ತು ಕಂದಾಯ ಸಚಿವ ಆರ್.ಅಶೋಕ್ ಸಹ ತೆರಳಲಿದ್ದಾರೆ.
ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಮಾತನಾಡಿದ ಸಿಎಂ, ದೇವರ ಕೃಪೆಯಿಂದೆ ನಮ್ಮ ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿವೆ. ನಾವು ಇನ್ನಷ್ಟು ಅನಾಹುತ ಆಗುತ್ತದೆ ಎಂದು ನಿರೀಕ್ಷೆ ಮಾಡಿದ್ದೆವು. ಆದರೆ ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾಗಿ ಅದು ತಪ್ಪಿದೆ. ಐದಾರು ಜಿಲ್ಲೆಗಳಲ್ಲಿ ಸಮೀಕ್ಷೆ ಮಾಡುತ್ತೇನೆ. ಖುದ್ದು ಪರಿಶೀಲನೆ ಮಾಡಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಅಲ್ಲದೆ ವಾಸ್ತವಿಕ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡುತ್ತೇವೆ ಎಂದರು.