ಬೆಂಗಳೂರು :ಕಳೆದ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸಾರಿಗೆ ಇಲಾಖೆಯ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ 2021ನ್ನು ಇಂದು ಅನಾವರಣಗೊಳಿಸಲಾಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಅನಾವರಣಗೊಳಿಸಿದರು.
ಸಾರ್ವಜನಿಕ ಸಾರಿಗೆಯ ಕೊನೆಯ ಮೈಲಿನ ಸಂಪರ್ಕ ಸುಧಾರಣೆಗೆ “ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ”ಎನ್ನುವ ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಲಾಗಿದೆ. 2020ರ ಮಾರ್ಚ್ನಲ್ಲಿ ಮಂಡಿಸಿದ್ದ ಬಕೆಟ್ನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಿದ್ದ ಸಿಎಂ ಯಡಿಯೂರಪ್ಪ, 300 ಎಸಿ ಎಲೆಕ್ಟ್ರಿಕ್ ಬಸ್‌ಗಳು ಹಾಗೂ 500 ಸಾಮಾನ್ಯ ಎಲೆಕ್ಟ್ರಿಕ್ ಬಸ್‌ಗಳನ್ನು ಖರೀದಿಸುವ, ಮೆಟ್ರೋ ಫೀಡರ್ ಸಾರಿಗೆಗಾಗಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 90 ಎಲೆಕ್ಟ್ರಿಕ್ ಬಸ್‌ಗಳ ಖರೀದಿ ಮಾಡುವ ಘೋಷಣೆ ಮಾಡಿದ್ದರು.