ಕರ್ನಾಟಕ

karnataka

ETV Bharat / state

ಖಾಸಗಿ ವಾಹಿನಿ ನೀಡಿದ ಆ್ಯಂಬುಲೆನ್ಸ್​ಗಳಿಗೆ ಸಿಎಂ ಬಿಎಸ್​ವೈ ಚಾಲನೆ - ಬೆಂಗಳೂರಿನಲ್ಲಿ ಅ್ಯಂಬುಲೆನ್ಸ್​ಗಳಿಗೆ ಚಾಲನೆ ನೀಡಿದ ಸಿಎಂ

ಖಾಸಗಿ ಕನ್ನಡ ವಾಹಿನಿ ಸರ್ಕಾರಕ್ಕೆ ನೀಡಿದ ಆ್ಯಂಬುಲೆನ್ಸ್​ಗಳಿಗೆ ಸಿಎಂ ಬಿಎಸ್​ವೈ ವಿಧಾನಸೌಧದ ಮುಂದೆ ಚಾಲನೆ ನೀಡಿದರು.

CM BSY Inaugurated Ambulences in Vidhana Soudha
ಅ್ಯಂಬುಲೆನ್ಸ್​ಗಳಿಗೆ ಸಿಎಂ ಬಿಎಸ್​ವೈ ಚಾಲನೆ

By

Published : Sep 15, 2020, 3:26 PM IST

ಬೆಂಗಳೂರು:ಖಾಸಗಿ ಕನ್ನಡ ವಾಹಿನಿ ರಾಜ್ಯ ಸರ್ಕಾರಕ್ಕೆ ಕೊಡುಗೆಯಾಗಿ ನೀಡಿದ ಆ್ಯಂಬುಲೆನ್ಸ್​ಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸೌಧದ ಮುಂದೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಿಎಂ, ಖಾಸಗಿ ವಾಹಿನಿಯವರು, 4 ಸಾವಿರ ಪಿಪಿ ಕಿಟ್​ಗಳು ಹಾಗೂ ಇತರೆ ವೈದ್ಯಕೀಯ ಉಪಕರಣಗಳನ್ನು ನೀಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ನಿರಂತರವಾಗಿ ಕೋವಿಡ್ ವಿರುದ್ಧ ಹೋರಾಟ ಮಾಡುತ್ತಿದೆ. ಇದಕ್ಕೆ ಸಂಘ ಸಂಸ್ಥೆಗಳು ಕೂಡ ನೆರವಾಗಿವೆ. ಜನರಲ್ಲಿ ಜಾಗೃತಿ ಮೂಡಿಸುವ ಮಾಧ್ಯಮಗಳು ಆರೋಗ್ಯ ಕ್ಷೇತ್ರಕ್ಕೆ ವೈದ್ಯಕೀಯ ಉಪಕರಣ ನೀಡುತ್ತಿರುವುದು ಶ್ಲಾಘನೀಯ ಎಂದು ಸಿಎಂ ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಆರೋಗ್ಯ ಸಚಿವ ಶ್ರೀರಾಮುಲು, ಕಂದಾಯ ಸಚಿವ ಆರ್. ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಮಾಜಿ ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ, ಖಾಸಗಿ ವಾಹಿನಿಯ ಮುಖ್ಯಸ್ಥರು ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

...view details