ಬೆಂಗಳೂರು: ಕುಡಿಯುವ ಉದ್ದೇಶಕ್ಕಾಗಿ ಕೊಯ್ನಾ ಮತ್ತು ಉಜ್ಜನಿ ಜಲಾಶಯದಿಂದ ರಾಜ್ಯಕ್ಕೆ ನೀರು ಬಿಡುಗಡೆಗೊಳಿಸುವಂತೆ ಸಿಎಂ ಯಡಿಯೂರಪ್ಪ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.
ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಿಎಂಗೆ ಬಿಎಸ್ವೈ ಪತ್ರ - ಕೊಯ್ನಾ ಜಲಾಶಯ
ಕೊಯ್ನಾ ಮತ್ತು ಉಜ್ಜನಿ ಜಲಾಶಯದಿಂದ ರಾಜ್ಯಕ್ಕೆ ನೀರು ಬಿಡುಗಡೆಗೊಳಿಸುವಂತೆ ಸಿಎಂ ಯಡಿಯೂರಪ್ಪ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಉತ್ತರ ಕರ್ನಾಟಕ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ರಾಯಚೂರು ಕುಡಿಯುವ ನೀರಿನ ಕೊರತೆ ಎದುರಿಸುತ್ತಿವೆ. ಈ ಮೊದಲು ಮಹಾರಾಷ್ಟ್ರ ಸರ್ಕಾರ ಕುಡಿಯುವ ಉದ್ದೇಶಕ್ಕಾಗಿ ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡಿ ಮಾನವಿಯತೆ ಮೆರೆದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಕುಡಿಯುವ ಉದ್ದೇಶಕ್ಕಾಗಿ ಕೊಯ್ನಾದಿಂದ 3 ಟಿಎಂಸಿ ನೀರು ಹಾಗೂ ಉಜ್ಜನಿ ಜಲಾಶಯದಿಂದ 3 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲು ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ಕೋರಿದ್ದಾರೆ.