ಕರ್ನಾಟಕ

karnataka

ETV Bharat / state

ಬೆಂಗಳೂರು ಗಲಭೆ ಪ್ರಕರಣ: ಸಿಎಂ ನಿವಾಸದಲ್ಲಿ ಮಹತ್ವದ ಸಭೆ - ಬೆಂಗಳೂರು ಗಲಭೆ

ಡಿ.ಜೆ.ಹಳ್ಳಿ ಗಲಭೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ.

CM BSY held meeting about bangalore violence:
ಸಿಎಂ ನಿವಾಸದಲ್ಲಿ ಮಹತ್ವದ ಸಭೆ ಆರಂಭ

By

Published : Aug 12, 2020, 5:14 PM IST

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಿಎಂ ನಿವಾಸದಲ್ಲಿ ಮಹತ್ವದ ಸಭೆ ಆರಂಭ

ಇದಕ್ಕೂ ಮುನ್ನ ಉಡುಪಿ ಪ್ರವಾಸದಿಂದ ಬೆಂಗಳೂರಿಗೆ ಮರಳಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ವೇಳೆ, ಡಿಜಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆ ನಂತರ ಸಿಎಂ ಅಧಿಕೃತ ನಿವಾಸ ಕಾವೇರಿಗೆ ಅಧಿಕಾರಿಗಳ ಜೊತೆಯಲ್ಲಿಯೇ ಅವರು ಆಗಮಿಸಿದರು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಚಿವ ಆರ್.ಅಶೋಕ್ ಕೂಡ ಸಭೆಗೆ ಬಂದಿದ್ದಾರೆ. ಕೆ.ಜಿ.ಹಳ್ಳಿ ಗಲಭೆ ಸಂಬಂಧ ಸಮಗ್ರವಾದ ಮಾಹಿತಿಯನ್ನು ಈ ವೇಳೆ ಸಿಎಂಗೆ ನೀಡಲಾಗುತ್ತಿದೆ.

ಪ್ರಕರಣದ ಉನ್ನತ ಮಟ್ಟದ ತನಿಖೆ, ತನಿಖೆಯ ಸ್ವರೂಪ ಸೇರಿದಂತೆ ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಯುತ್ತಿದೆ.

ABOUT THE AUTHOR

...view details