ಕರ್ನಾಟಕ

karnataka

ETV Bharat / state

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗಿ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದರು.

ಯಡಿಯೂರಪ್ಪ

By

Published : Sep 13, 2019, 2:21 PM IST

ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣಾಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ ನೀಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜವಳಿ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಸಂಬಂಧ ಸಿಎಂ ಜೊತೆ ಮಾತುಕತೆ ನಡೆಸಿದರು.

ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ್ ಯೋಜನೆಯ ಅಡಿ ರಾಜ್ಯ ಸರ್ಕಾರ ಯಾವೆಲ್ಲ ಕಾರ್ಯಕ್ರಮಗಳನ್ನು ಜಾರಿಗೆ ತರಬಹುದು ಮತ್ತು ಹೇಗೆ ಈ ಯೋಜನೆಯನ್ನು ರಾಜ್ಯದಲ್ಲಿ ಯಶಸ್ವಿಗೊಳಿಸಬಹುದು ಅನ್ನೋದರ ಬಗ್ಗೆ ಮಾಹಿತಿ ನೀಡಿದರು. ಪೋಷಣೆ ಅಭಿಯಾನ ಮಕ್ಕಳ ರಕ್ತಹೀನತೆ, ಕಡಿಮೆ ತೂಕ, ತೀವ್ರ ಅಪೌಷ್ಟಿಕತೆ ತಡೆಗಟ್ಟುವ ಯೋಜನೆಯಾಗಿದ್ದು, ಇದಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನಿಡಬೇಕು. ಅಷ್ಟೇ ಅಲ್ಲದೇ ಸಾಮಾಜಿಕ ಸಂಸ್ಥೆಗಳು ಸಹ ಈ ಯೋಜನೆಗೆ ಕೈಜೊಡಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಬೇಕು ಎಂದು ಹೇಳಿದರು. ಇದರ ಜೊತೆಗೆ ಪೋಷಣೆ ಅಭಿಯಾನ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ಮುಖ್ಯಮಂತ್ರಿಗಳಿಗೆ ಸ್ಮೃತಿ ಇರಾನಿ ವಿವರಿಸಿದರು.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಮಾತುಕತೆ

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಮೋದಿ ಅವರ ಸ್ವಚ್ಛ ಭಾರತ ನಿರ್ಮಾಣದ ಕನಸು ನನಸಾಗುವ ಕಾರ್ಯಕ್ರಮ ಇದಾಗಿದ್ದು, ಇದಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ‌ ನೀಡಲಿದೆ. ಈಗಾಗಲೇ ರಾಜ್ಯ ಸರ್ಕಾರ 19 ಜಿಲ್ಲೆಗಳಲ್ಲಿ ಪೋಷಣ ಅಭಿಯಾನಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ಮುಂದಿನ ದಿನಗಳಲ್ಲಿ ಉಳಿದಿರುವ 11ಜಿಲ್ಲೆಗಳಲ್ಲೂ ಇದನ್ನು ಜಾರಿಗೆ ತರುತ್ತೇವೆ. ಆದಷ್ಟು ಬೇಗ ಅಧಿಕಾರಿಗಳ ಜೊತೆ ಒಂದು ಸಭೆ ನಡೆಸಿ ಪೋಷಣ ಅಭಿಯಾನ ರಾಜ್ಯದಲ್ಲಿ ಯಶಸ್ವಿಯಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಕೇಂದ್ರ ಮಂತ್ರಿಗಳಿಗೆ ಭರವಸೆ ನೀಡಿದರು.

ABOUT THE AUTHOR

...view details