ಕರ್ನಾಟಕ

karnataka

ಹೆಚ್ಚಿದ ಕೊವಿಡ್-19​ ಭೀತಿ: ಖಾಸಗಿ ಆಸ್ಪತ್ರೆಗಳ ನೆರವು ಪಡೆಯುವ ಸಾಧ್ಯತೆ

ಕೋವಿಡ್-19 ನಿಯಂತ್ರಣಕ್ಕೆ ಬಾರದ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಟಾಸ್ಕ್ ಫೋರ್ಸ್ ಕಮಿಟಿ ಜೊತೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ. ಜೊತೆಗೆ ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಜೊತೆ ಕೂಡ ಸಿಎಂ ಸಭೆ ನಡೆಸಲಿದ್ದಾರೆ.

By

Published : Mar 23, 2020, 9:41 AM IST

Published : Mar 23, 2020, 9:41 AM IST

corona meeting for BSY
ಸಿಎಂ ಬಿ.ಎಸ್​. ಯಡಿಯೂರಪ್ಪ ಸಭೆ

ಬೆಂಗಳೂರು: ಕೋವಿಡ್-19 ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ಕುರಿತಂತೆ ವಿಧಾನಸೌದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಜೊತೆ ಸಿಎಂ ಬಿ.ಎಸ್​. ಯಡಿಯೂರಪ್ಪ ಸಭೆ ನಡೆಸಲಿದ್ದಾರೆ

ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ, ಅದರಲ್ಲೂ ನಿನ್ನೆ ಒಂದೇ ದಿನ 6 ಹೊಸ ಪ್ರಕರಣಗಳು ಪತ್ತೆಯಾಗಿವೆ ಈ ಹಿನ್ನೆಲೆಯಲ್ಲಿ, 9 ಜಿಲ್ಲೆಗಳನ್ನು ಲಾಕ್​ ಡೌನ್​ ಮಾಡಲಾಗಿದೆ, ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಟಾಸ್ಕ್ ಫೋರ್ಸ್ ಕಮಿಟಿ ಜೊತೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ.

ಇನ್ನು ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಜೊತೆ ಕೂಡ ಸಿಎಂ ಸಭೆ ನಡೆಸಲಿದ್ದು, ಸಭೆಯಲ್ಲಿ ಕೊರೊನಾ ತಡೆಗೆ ಖಾಸಗಿ ಆಸ್ಪತ್ರೆಗಳಿಂದ ಸಹಕಾರ ಪಡೆದುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ.

ಈಗಾಗಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಕೊರೊನಾ ಹೆಚ್ಚಾದರೆ ವೆಂಟಿಲೇಟರ್ ಅಭಾವ ಸೃಷ್ಟಿಯಾಗಲಿದೆ. ಈ ಹಿನ್ನೆಲೆ ಖಾಸಗಿ ಆಸ್ಪತ್ರೆಗಳಿಂದ ವೆಂಟಿಲೇಟರ್ ಸಹಾಯ ಪಡೆಯಬಹುದು. ವೆಂಟಿಲೇಟರ್ ಜೊತೆಗೆ ಹಾಸಿಗೆ ಕೊರತೆ ಆಗದಂತೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

ABOUT THE AUTHOR

...view details