ಬೆಂಗಳೂರು:ಬೆಳಗ್ಗೆಯಷ್ಟೇ ಕೊರೊನಾ ಮುಂಜಾಗ್ರತಾ ಕ್ರಮ ಹಾಗು ಜನತಾ ಕರ್ಫ್ಯೂ ಕುರಿತ ಸ್ಥಿತಿಗತಿ ಕುರಿತು ಸಚಿವರ ಜೊತೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಎರಡನೇ ಬಾರಿಗೆ ಸಚಿವರ ಹಾಗು ಅಧಿಕಾರಿಗಳನ್ನು ಕರೆಸಿಕೊಂಡು ಸಿಎಂ ಸಭೆ ನಡೆಸುತ್ತಿದ್ದಾರೆ.
ಸಚಿವರು, ಅಧಿಕಾರಿಗಳ ತುರ್ತು ಸಭೆ ನಡೆಸುತ್ತಿರುವ ಸಿಎಂ - ಕೊರೊನಾ ವೈರಸ್ ಬಗ್ಗೆ ಸಿಎಂ ಸಭೆ
ಕೊರೊನಾ ನಿಯಂತ್ರಣ ಮುಂಜಾಗ್ರತಾ ಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ.
ಸಿಎಂ ಬಿಎಸ್ವೈ ಬುಲಾವ್ ಮೇರೆಗೆ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥ್ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆಗಮಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ್ ಭಾಸ್ಕರ್ ಕೂಡ ಆಗಮಿಸಿದ್ದು, ಸಚಿವರು ಹಾಗು ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ ನಡೆಸುತ್ತಿದ್ದಾರೆ.
ಇವತ್ತು ಬೆಳಗಿನ ತುರ್ತು ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಜಾರಿ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಜೊತೆಗೆ ಕೊರೊನಾ ನಿಯಂತ್ರಣ, ಮಾರ್ಗಸೂಚಿ ಅನುಷ್ಠಾನ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ.