ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ: ಆಕ್ಸಿಜನ್ ತಯಾರಿಕೆ, ಪೂರೈಕೆ ಸಂಬಂಧ ಚರ್ಚೆ - chamarajanagara recent news
16:05 May 03
ಚಾಮರಾಜನಗರದ ದುರಂತದಿಂದ ಎಚ್ಚೆತ್ತ ಸಿಎಂ
ಬೆಂಗಳೂರು: ಚಾಮರಾಜನಗರ ಜಿಲ್ಲಾ ಆಸ್ಪತ್ರೆ ದುರಂತ ಪ್ರಕರಣದ ಬೆನ್ನಲ್ಲೆ ರಾಜ್ಯದಲ್ಲಿ ಆಕ್ಸಿಜನ್ ಉತ್ಪಾದನೆ ಮತ್ತು ಪೂರೈಕೆ ಕುರಿತು ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಆಕ್ಸಿಜನ್ ತಯಾರಿಕೆ ಮತ್ತು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಘಟನೆ ಯಾವುದೇ ಜಿಲ್ಲೆಯಲ್ಲಿ ಮರುಕಳಿಸದಂತೆ ಮಾಡಲು ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದು, ಮೆಡಿಸಿನ್ ಕೊರತೆಯೂ ಎದುರಾಗದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಜಿಲ್ಲಾ ಆಸ್ಪತ್ರೆಗಳ ಸ್ಥಿತಿ ಗತಿ ಬಗ್ಗೆ ವರದಿ ಸಂಗ್ರಹ ಮಾಡುವಂತೆ ಸಿಎಂ ಸೂಚನೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.