ಬೆಂಗಳೂರು: ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿಯಾಗಿದ್ದಾರೆ. ರಾಜಭವನಕ್ಕೆ ಭೇಟಿ ನೀಡಿದ ಸಿಎಂ ಬಿಎಸ್ವೈ ವಿಶ್ರಾಂತಿ ಪಡೆಯುತ್ತಿರುವ ರಾಜ್ಯಪಾಲರ ಯೋಗಕ್ಷೇಮ ವಿಚಾರಿಸಿದ್ದಾರೆ. ಈ ವೇಳೆ ಕೆಲಕಾಲ ಅನೌಪಚಾರಿಕ ಮಾತುಕತೆ ಸಹ ನಡೆಸಿದ್ದಾರೆ.
ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಜ್ಯಪಾಲರ ಯೋಗಕ್ಷೇಮ ವಿಚಾರಿಸಿದ CM BSY - ರಾಜ್ಯಪಾಲ ವಜುಭಾಯಿ ವಾಲಾ
ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಸಿಎಂ ಬಿಎಸ್ವೈ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳ ಬದಿಗೊತ್ತಿ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಯೋಗಕ್ಷೇಮದ ಬಗ್ಗೆ ಮಾಹಿತಿ ಪಡೆದರು.
ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಜ್ಯಪಾಲರ ಯೋಗಾಕ್ಷೇಮ ವಿಚಾರಿಸಿದ ಸಿಎಂ ಬಿಎಸ್ವೈ
ಇಡೀ ದಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದ ಸಿಎಂ ಯಡಿಯೂರಪ್ಪ ಸಂಜೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಬದಿಗೊತ್ತಿ ಏಕಾಏಕಿ ರಾಜಭವನಕ್ಕೆ ಭೇಟಿ ನೀಡಿದರು. ರಾಜ್ಯಪಾಲರ ಜೊತೆ ಮಾತುಕತೆ ನಡೆಸಿ, ಕೊರೊನಾ 2ನೇ ಅಲೆ ನಿರ್ವಹಣೆ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಕಾಲಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಓದಿ:ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಅಂತರ್ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Last Updated : Jun 30, 2021, 7:13 PM IST