ಬೆಂಗಳೂರು:ಪೊಲೀಸ್ ಸಂಸ್ಮರಣಾ ದಿನಾಚರಣೆ ಹಿನ್ನೆಲೆಯಲ್ಲಿ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಅರ್ಪಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದರು.
ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಸಿಎಂ ಗೌರವಾರ್ಪಣೆ - Police Commemoration Day celebration in Bangalore
ಬೆಂಗಳೂರಿನ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಬಿ.ಎಸ್.ಯಡಿಯೂರಪ್ಪ, ಪೊಲೀಸ್ ಸಂಸ್ಮರಣ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಹುತಾತ್ಮರಾದ ಪೊಲೀಸರನ್ನು ಸ್ಮರಿಸಿ ಗೌರವ ಸಲ್ಲಿಸಿದರು.
ಪೊಲೀಸ್ ಸಂಸ್ಮರಣಾ ದಿನಾಚರಣೆ
ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಜಿ-ಐಜಿಪಿ ಪ್ರವೀಣ್ ಸೂದ್ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.