ಬೆಂಗಳೂರು: ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೆಲ ವರ್ಗಗಳಿಗೆ ಮತ್ತೊಂದು ಆರ್ಥಿಕ ಪ್ಯಾಕೇಜ್ ಇಂದು ಸಂಜೆ ಘೋಷಣೆಯಾಗಲಿದೆ. ಎರಡನೇ ಪ್ಯಾಕೇಜ್ಅನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಸಂಜೆ 5 ಗಂಟೆಗೆ ಸಿಎಂ ಬಿಎಸ್ವೈ ಸುದ್ದಿಗೋಷ್ಠಿ: 2ನೇ ಪ್ಯಾಕೇಜ್ ಘೋಷಿಸುವ ಸಾಧ್ಯತೆ
ಇಂದು ಸಂಜೆ ಸಿಎಂ ಬಿಎಸ್ವೈ ಸುದ್ದಿಗೋಷ್ಠಿ ಕರೆದಿದ್ದು, ಲಾಕ್ಡೌನ್ ವಿಸ್ತರಣೆ ಮತ್ತು ವಿಶೇಷ ಪ್ಯಾಕೇಜ್ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ.
ಮೇ ತಿಂಗಳಲ್ಲಿ ಲಾಕ್ಡೌನ್ ಜಾರಿ ಮಾಡಿದ ಬಳಿಕ 1,200 ಕೋಟಿ ರೂ.ಗಳ ಮೊದಲ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಚಾಲಕರು, ಕಾರ್ಮಿಕರು, ಹೂವು ಬೆಳೆಗಾರರು ಸೇರಿದಂತೆ ಹಲವು ವರ್ಗದ ಜನರಿಗೆ ಈ ಪ್ಯಾಕೇಜ್ನಲ್ಲಿ ಸಹಾಯಧನ ನೀಡಲಾಗಿದೆ. ಇಂದು ಎರಡನೇ ಪ್ಯಾಕೇಜ್ ಘೋಷಣೆಯಾಗಲಿದೆ. ಸುಮಾರು 500-600 ಕೋಟಿ ರೂ. ಮೊತ್ತದ ಪ್ಯಾಕೇಜ್ ಸಿಎಂ ಪ್ರಕಟಿಸುವ ಸಾಧ್ಯತೆಯಿದೆ.
ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸುದ್ದಿಗೋಷ್ಠಿ ಕರೆದಿದ್ದು, ಅಲ್ಲಿ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗ್ತಿದೆ. ಲಾಕ್ಡೌನ್ ವಿಸ್ತರಣೆ ಬಗ್ಗೆಯೂ ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.